ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಅನ್ನ ದಾಸೋಹ ಯೋಜನೆ: ಖಾದರ್

ಬೆಂಗಳೂರು, ಜ.10: ಊಟ, ವಸತಿ ಉಚಿತವಾಗಿ ನೀಡುವ 439 ಅನಾಥಾಶ್ರಮ. ವೃದ್ಧಾಶ್ರಮಗಳಿಗೆ ‘ಅನ್ನ ದಾಸೋಹ’ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದರು.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಈ ಯೋಜನೆ ಘೋಷಣೆ ಮಾಡಿದ್ದರು. ಅದರಂತೆ ಅನಾಥಾಶ್ರಮ, ವೃದ್ಧಾಶ್ರಮದಲ್ಲಿರುವ ಅಶಕ್ತರಿಗೆ ಹಾಗೂ ಸಾವಿರಾರು ಮಕ್ಕಳಿಗೆ ಮಾಸಿಕವಾಗಿ ಪ್ರತಿ ತಿಂಗಳು 15 ಕೆಜಿ ಅಕ್ಕಿ ಉಚಿತವಾಗಿ ನೀಡುವ ಅನ್ನದಾಸೋಹ ಯೋಜನೆ ಆರಂಭಿಸಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿಗಾಗಿ 15 ಲಕ್ಷ ಅರ್ಜಿಗಳು ಬಂದಿದ್ದವು. ಅದರಲ್ಲಿ 11.5 ಲಕ್ಷ ಅರ್ಜಿಗಳ ಪರಿಶೀಲನೆ ಮುಗಿದಿದೆ. ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ಅದನ್ನು ತಲುಪಿಸಲಾಗುತ್ತಿದೆ ಎಂದು ಹೇಳಿದರು.
Next Story





