ಜ. 14ರಂದು ಹೆಜಮಾಡಿಯಲ್ಲಿ ಉಚಿತ ವೈದ್ಯಕೀಯ ಶಿಬಿರ
ಪಡುಬಿದ್ರಿ, ಜ. 10: ಹೆಜಮಾಡಿಯ ಅಲ್ ಅರ್ ಹರ್ ಆಂಗ್ಲ ಮಾಧ್ಯಮ ಶಾಲೆ, ಸ್ವರ್ಣ ಸೌಹಾರ್ದ ಕ್ರೆಡಿಟ್ ಕೋ ಟಪರೇಟಿವ್ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರವನ್ನು ಜ.14 ರಂದು ಹೆಜಮಾಡಿಯಲ್ಲಿ ಆಯೋಜಿಸಲಾಗಿದೆ.
ಬುಧವಾರ ಕಾಪು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಎಂದು ಶಾಲೆಯ ಸಂಚಾಲಕ ಕೆ.ಎಸ್. ಶೇಖಬ್ಬ ಮಾಹಿತಿ ನೀಡಿದರು. ಶಾಲೆ ಆರಂಭಗೊಂಡ 20ವರ್ಷಗಳಲ್ಲಿ ಶಾಲೆಯ ವಿದ್ಯಾರ್ಥಿಗಳಿಗಾಗಿ ಹಲವಾರು ಶೈಕ್ಷಣಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಈ ಭಾರಿ ಸಾರ್ವಜನಿಕರಿಗಾಗಿ ಆರೋಗ್ಯ ಶಿಬಿರವನ್ನು ಆಯೋಜಿಸಿರುವುದಾಗಿ ಹೇಳಿದರು.
ಮಂಗಳೂರು ನಾಟೆಕಲ್‌ನ ಕಣಚೂರು ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ನಡೆಯುವ ಈ ಶಿಬಿರವನ್ನು ಡಾ. ಮಹಮ್ಮದ್ ಇಸ್ಮಾಯಿಲ್ ಎಚ್ ಬೆಳಿಗ್ಗೆ 9.30ಕ್ಕೆ ಉದ್ಘಾಟಿಸುವರು. ಕನ್ನಂಗಾರ್ ಜುಮ್ಮಾ ಮಸೀದಿಯ ಅಧ್ಯಕ್ಷ ಎಚ್.ಬಿ. ಮಹಮ್ಮದ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಣಚೂರು ಗ್ರೂಫ್ ಆಫ್ ಇನ್‌ಸ್ಟಿಟ್ಯೂಟ್‌ನ ಅಧ್ಯಕ್ಷ ಹಾಜಿ ಯು.ಕೆ.ಮೋನು, ಕಣಚೂರು ಮೆಡಿಕಲ್‌ಲ್ ಮತ್ತು ರಿಸರ್ಚ್ ಸೆಂಟರ್‌ನ ಮುಖ್ಯಸ್ಥ ಡಾ.ರೋಹನ್ ಮೋನಿಸ್, ದಕ ಮತ್ತುನ ಉಡುಪಿ ಮುಸ್ಲಿಮ್ ಎಜುಕೇಶನ್ ಅಧ್ಯಕ್ಷ ಮುಹಮ್ಮದ್ ಬ್ಯಾರಿ ಎಡಪದವು ಮತ್ತಿತರರು ಭಾಗವಹಿಸಲಿದ್ದಾರೆ.
ಶಿಬಿರದಲ್ಲಿ ತಜ್ಞ ವೈದ್ಯರು ಭಾಗವಹಿಸಲಿದ್ದು, ವೈದ್ಯಕೀಯ ಶಸ್ತ್ರ ತಜ್ಞರು, ಕಿವಿ, ಮೂಗು, ಗಂಟಲು ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ನೇತ್ರ ತಜ್ಞರು, ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞರು, ಮಕ್ಕಳ ತಜ್ಞರು, ಉಚಿತ ರಕ್ತ ತಪಾಸಣೆ, ಮೂಳೆ ತಜ್ಞರು ಭಾಗವಹಿಸಲಿದ್ದು, ಉಚಿತ ಔಷಧಿಯನ್ನು ವಿತರಿಸಲಾಗುವುದು. ಶಿಬಿರದಲ್ಲಿ ಪಾಲ್ಗೊಂಡವರಿಗೆ ಕಣಚೂರು ಕ್ಯಾಂಪ್ ಕಾರ್ಡ್ ವಿತರಿಸಲಾಗುವುದು. ಈ ಕಾರ್ಡ್ ಹೊಂದಿದವರಿಗೆ ಕಣಚೂರು ಆಸ್ಪತ್ರೆಯಲ್ಲಿ ಉಚಿತ ಶಸ್ತ್ರ ಚಿಕಿತ್ಸೆ, ಉಚಿತ ಊಟ ನೀಡಲಾಗುವುದು ಎಂದು ಹೇಳಿದರು.
ಶಾಲೆಯ ಪ್ರಾಂಶುಪಾಲ ಐ. ಕ್ರಿಸ್ಟೋಪರ್ ಕೋಟ್ಯಾನ್, ಕಾರ್ಯದರ್ಶಿ ಎಂ.ಐ. ಮಹಮ್ಮದ್, ಹಂಝ ಅಹಮ್ಮದ್, ಅಬ್ದುಲ್ ರಝಾಕ್ ಇದ್ದರು.







