Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ರಾಯ್ಟರ್ಸ್’ ವರದಿಗಾರರ ವಿರುದ್ಧ ‘ರಹಸ್ಯ...

‘ರಾಯ್ಟರ್ಸ್’ ವರದಿಗಾರರ ವಿರುದ್ಧ ‘ರಹಸ್ಯ ಕಾಯ್ದೆ’ ಹೇರಿದ ಮ್ಯಾನ್ಮಾರ್

ರೋಹಿಂಗ್ಯನ್ನರ ಮೇಲಿನ ದೌರ್ಜನ್ಯಗಳ ಬಗ್ಗೆ ವರದಿ ಮಾಡಿದ್ದ ಪತ್ರಕರ್ತರು

ವಾರ್ತಾಭಾರತಿವಾರ್ತಾಭಾರತಿ10 Jan 2018 11:21 PM IST
share
‘ರಾಯ್ಟರ್ಸ್’ ವರದಿಗಾರರ ವಿರುದ್ಧ ‘ರಹಸ್ಯ ಕಾಯ್ದೆ’ ಹೇರಿದ ಮ್ಯಾನ್ಮಾರ್

ಯಾಂಗನ್ (ಮ್ಯಾನ್ಮಾರ್), ಜ. 10: ಮ್ಯಾನ್ಮಾರ್ ಸರಕಾರವು ಬುಧವಾರ ‘ರಾಯ್ಟರ್ಸ್’ ಸುದ್ದಿ ಸಂಸ್ಥೆಯ ಇಬ್ಬರು ವರದಿಗಾರರ ವಿರುದ್ಧ ಸರಕಾರಿ ರಹಸ್ಯಗಳ ಕಾಯ್ದೆಯನ್ವಯ ಮೊಕದ್ದಮೆ ದಾಖಲಿಸಿದೆ.

ಈ ಅಪರಾಧಕ್ಕೆ ಗರಿಷ್ಠ 14 ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

31 ವರ್ಷದ ವಾ ಲೋನ್ ಮತ್ತು 27 ವರ್ಷದ ಸೋ ಊ ಅವರನ್ನು ಡಿಸೆಂಬರ್ 12ರಂದು ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗುವಂತೆ ಬರಹೇಳಿ ಬಂಧಿಸಲಾಗಿತ್ತು.

ತಾವು ಭೇಟಿಯಾಗಲು ಹೋಗಿದ್ದ ಅಧಿಕಾರಿಗಳು ಕೆಲವು ದಾಖಲೆಗಳನ್ನು ತಮಗೆ ನೀಡಿದ ಕೂಡಲೇ ತಮ್ಮನ್ನು ಬಂಧಿಸಲಾಗಿತ್ತು ಎಂಬುದಾಗಿ ಈ ಪತ್ರಕರ್ತರು ತಮಗೆ ಹೇಳಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ಹೇಳಿದ್ದಾರೆ.

ಅವರು ಮ್ಯಾನ್ಮಾರ್‌ನ ರಖೈನ್ ರಾಜ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ವರದಿ ಮಾಡುವ ‘ರಾಯ್ಟರ್ಸ್’ ತಂಡದ ಸದಸ್ಯರಾಗಿದ್ದರು.

ಅಮಾನುಷ ಸೇನಾ ದಮನ ಕಾರ್ಯಾಚರಣೆಗೆ ಬೆದರಿ ಸುಮಾರು 6.55 ಲಕ್ಷಕ್ಕೂ ಅಧಿಕ ರೊಹಿಂಗ್ಯಾ ಮುಸ್ಲಿಮರು ರಖೈನ್ ರಾಜ್ಯದಿಂದ ನೆರೆಯ ಬಾಂಗ್ಲಾದೇಶಕ್ಕೆ ಪಲಾಯನಗೈದಿದ್ದಾರೆ ಎಂಬುದಾಗಿ ವಿಶ್ವಸಂಸ್ಥೆ ಹೇಳಿದೆ.

‘‘ನಾವು ಸತ್ಯವನ್ನು ಬಯಲಿಗೆಳೆಯಲು ಪ್ರಯತ್ನಿಸುತ್ತಿದ್ದೆವು. ಅದಕ್ಕಾಗಿ ಅವರು ನಮ್ಮನ್ನು ಬಂಧಿಸಿದ್ದಾರೆ’’ ಎಂದು 30 ನಿಮಿಷಗಳ ವಿಚಾರಣೆಯ ಬಳಿಕ ಜೈಲಿಗೆ ಕರೆದೊಯ್ಯುತ್ತಿದ್ದ ವೇಳೆ ನ್ಯಾಯಾಲಯದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಾ ಲೋನ್ ಹೇಳಿದರು.

ಕಪ್ಪು ಬಟ್ಟೆ ಧರಿಸಿ ಪತ್ರಕರ್ತರ ಪ್ರತಿಭಟನೆ

ಇಬ್ಬರು ‘ರಾಯ್ಟರ್ಸ್’ ಪತ್ರಕರ್ತರ ಬಂಧನದ ವಿರುದ್ಧ ಯಾಂಗನ್‌ನ ಪತ್ರಕರ್ತರು ನ್ಯಾಯಾಲಯದ ಹೊರಗಡೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು.

‘ಪತ್ರಿಕೋದ್ಯಮವು ಅಪರಾಧವಲ್ಲ’ ಮತ್ತು ‘ಬಂಧಿತ ಪತ್ರಕರ್ತರನ್ನು ಈಗಲೇ ಬಿಡುಗಡೆ ಮಾಡಿ’ ಎಂಬ ಬರಹಗಳನ್ನು ಅವರು ಪ್ರದರ್ಶಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X