ಜ.12: ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿ ಮಂಗಳೂರಿಗೆ
ಮಂಗಳೂರು, ಜ.11: ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿ ಜ.12ರಂದು ಬೆಳಗ್ಗೆ 8:55ಕ್ಕೆ ಮಂಗಳೂರಿಗೆ ಆಗಮಿಸಿ 9:15ಕ್ಕೆ ಶಕ್ತಿನಗರದಲ್ಲಿ ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ, ಬೆಳಗ್ಗೆ 10ಕ್ಕೆ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿ ಮತ್ತು ಪಶ್ಚಿಮ ವಲಯದ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 12ಕ್ಕೆ ಮಂಗಳೂರಿನಿಂದ ಉಡುಪಿಗೆ ತೆರಳಲಿದ್ದಾರೆ.
ನಂತರ ಮಂಗಳೂರಿಗೆ ಆಗಮಿಸಿ ಇತ್ತೀಚೆಗೆ ಮೃತಪಟ್ಟ ದೀಪಕ್ ರಾವ್ ಮತ್ತು ಬಶೀರ್‌ರ ಮನೆಗಳಿಗೆ ಭೇಟಿ ನೀಡುವರು. ರಾತ್ರಿ 7:35ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ ಹೋಗಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





