ಮಂಗಳೂರು: ಬಹುಭಾಷಾ ಕವನಗಳ ಆಹ್ವಾನ
ಮಂಗಳೂರು, ಜ.11: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಜ. 26ರಂದು ನಗರದ ಪುರಭವನದಲ್ಲಿ ಬಹುಭಾಷಾ ಕವಿಗೋಷ್ಠಿಯನ್ನು ಆಯೋಜಿಸಿದೆ. ಕನ್ನಡ, ತುಳು, ಕೊಂಕಣಿ, ಮರಾಠಿ, ಹಿಂದಿ, ಸಂಸ್ಕೃತ, ಮಲಯಾಳಿ, ಬ್ಯಾರಿ, ಕೊಡವ, ಅರೆಭಾಷೆಗಳ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ.
ತಾವೇ ರಚಿಸಿದ ಕವನಗಳನ್ನು ಜ. 22ರೊಳಗೆ ಅಧ್ಯಕ್ಷರು, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕಲ್ಕೂರ ಪ್ರತಿಷ್ಠಾನ, ಶ್ರೀಕೃಷ್ಣ ಕಾಂಪ್ಲೆಕ್ಸ್, ಮಹಾತ್ಮ ಗಾಂಧಿ ರಸ್ತೆ, ಕೊಡಿಯಾಲ್‌ಬೈಲ್, ಮಂಗಳೂರು ಈ ವಿಳಾಸಕ್ಕೆ ತಲುಪುವಂತೆ ಕಳುಹಿಸಿಕೊಡಬಹುದು ಎಮಧು ಕಸಾಪ ಪ್ರಕಟನೆ ತಿಳಿಸಿದೆ.
Next Story





