ಬಂಟ್ವಾಳ: ಮಣಿನಾಲ್ಕೂರು ಗ್ರಾ.ಪಂ. ಕಚೇರಿಗೆ ಎಸಿಪಿ ಅಧಿಕಾರಿಗಳು ದಾಳಿ
ಬಂಟ್ವಾಳ, ಜ. 11: ಮಣಿ ನಾಲ್ಕೂರು ಗ್ರಾಮ ಪಂಚಾಯತ್ ಕಚೇರಿಗೆ ಗುರುವಾರ ಎಸಿಪಿ ಅಧಿಕಾರಿಗಳು ದಾಳಿ ನಡೆಸಿ ಲಂಚ ಪಡೆಯುತ್ತಿದ್ದ ಆರೋಪದಲ್ಲಿ ಪಿಡಿಒ ಎಸ್. ನಂಜುಂಡಯ್ಯ ಅವರನ್ನು ಬಂಧಿಸಿದ್ದಾರೆ.
ಮಣಿನಾಲ್ಕೂರು ಗ್ರಾಮದ ಕೆಯ್ಯೊಟ್ಟು ಎಂಬಲ್ಲಿನ ಪದ್ಮನಾಭ ಮಯ್ಯ ಅವರಿಂದ 1 ಸಾವಿರ ರೂ ಲಂಚ ಪಡೆಯುತ್ತಿದ್ದ ವೇಳೆ ಅವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಪಂಪ್ ಸೆಟ್ ಬದಲಾವಣೆ ಮತ್ತು ಕುಡಿಯುವ ನೀರಿನ ಸಂಪರ್ಕಕ್ಕೆ 500 ರೂ ಹಣ ಬೇಡಿಕೆ ಇಟ್ಟ ಆರೋಪದಲ್ಲಿ ದೂರುದಾರರು ಎಸಿಬಿಗೆ ದೂರು ನೀಡಿದ್ದರು. ಎಸಿಬಿ ಅಧಿಕಾರಿಗಳಾದ ಯೋಗೀಶ್ ಕುಮಾರ್ ನೇತೃತ್ವದ ತಂಡ ದಾಳಿ ಕಾರ್ಯಾಚರಣೆ ನಡೆಸಿತ್ತು.
Next Story





