ಅಟಾರ್ನಿ ಜನರಲ್ ರನ್ನು ಭೇಟಿಯಾದ ಸಿಜೆಐ

ಹೊಸದಿಲ್ಲಿ, ಜ.12: ನಾಲ್ವರು ನ್ಯಾಯಮೂರ್ತಿಗಳು ತಮ್ಮ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಸುದ್ದಿ ಗೋಷ್ಠಿ ಏರ್ಪಡಿಸಿದ್ದಾರೆ..
ಇದೇ ವೇಳೆ ಸಿಜೆಐ ಅವರು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಮೂರ್ತಿಗಳಾದ ಚೆಲಮೆಶ್ವರ್, ರಂಜನ್ ಗೋಗೊಯಿ, ಮದನ್ ಲೋಕುರ್ ಮತ್ತು ಕುರಿಯನ್ ಜೋಸೆಫ್ ಅವರು ಇಂದು ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಮುಖ್ಯ ನ್ಯಾಯಮೂರ್ತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು..
Next Story