ನಾವು ಮೂಗು ತೂರಿಸುವುದಿಲ್ಲ : ಕೇಂದ್ರ ಸರಕಾರ
ಸುಪ್ರೀಂ ಕೋರ್ಟ್ ನ ಆಡಳಿತ ವ್ಯವಸ್ಥೆಯ ಬಗ್ಗೆ ನ್ಯಾಯಮೂರ್ತಿಗಳ ಅಸಮಾಧಾನ
ಹೊಸದಿಲ್ಲಿ, ಜ.12: ನಾವು ಮೂಗು ತೂರಿಸಲು ಇಷ್ಟಪಡುವುದಿಲ್ಲ. ಇದು ನ್ಯಾಯಾಂಗ ವ್ಯವಸ್ಥೆಯ ಆಂತರಿಕ ವಿಚಾರವಾಗಿದೆ ಎಂದು ಕೇಂದ್ರ ಸರಕಾರ ಹೇಳಿಕೆ ನೀಡಿದೆ.
ಹೊಸದಿಲ್ಲಿಯಲ್ಲಿ ಸುಪ್ರೀಂ ಕೋರ್ಟ್ ನ ನಾಲ್ವರು ನ್ಯಾಯಮೂರ್ತಿಗಳು ಸುದ್ದಿಗೋಷ್ಠಿ ನಡೆಸಿ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ನ ಆಡಳಿತ ವ್ಯವಸ್ಥೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಕೇಂದ್ರ ಸರಕಾರದಿಂದ ಈ ಹೇಳಿಕೆ ಹೊರಬಿದ್ದಿದೆ.
ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳು ನಡೆಸಿದ ಪತ್ರಿಕಾಗೋಷ್ಠಿಯ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
Next Story