Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ವಿಶ್ವರೂಪಂ 2 : ದರ್ಶನ ಸನ್ನಿಹಿತ

ವಿಶ್ವರೂಪಂ 2 : ದರ್ಶನ ಸನ್ನಿಹಿತ

ವಾರ್ತಾಭಾರತಿವಾರ್ತಾಭಾರತಿ12 Jan 2018 4:25 PM IST
share
ವಿಶ್ವರೂಪಂ 2 : ದರ್ಶನ ಸನ್ನಿಹಿತ

‘ಉಲಗ ನಾಯಕನ್’ ಕಮಲ್ ಹಾಸನ್‌ರ ಬಹುನಿರೀಕ್ಷಿತ ಚಿತ್ರ ವಿಶ್ವರೂಪಂ 2 ಅಂತೂ ಶೀಘ್ರದಲ್ಲೇ ಬಿಡುಗಡೆಯ ಭಾಗ್ಯವನ್ನು ಕಾಣಲಿದೆ. ಕಮಲ್ ಸ್ವತಃ ಚಿತ್ರಕಥೆ ಬರೆದು, ನಿರ್ದೇಶಿಸಿರುವ ಮತ್ತು ಸಹನಿರ್ಮಾಪಕರಾಗಿರುವ ಈ ಚಿತ್ರ ಮುಂದಿನ ಒಂದೆರಡು ತಿಂಗಳಲ್ಲಿ ತೆರೆಕಾಣಲಿರುವುದು ಖಚಿತವಾಗಿದೆ. ಅಪ್ಪಟ ಸ್ಪೈ ಥ್ರಿಲ್ಲರ್ ಕತೆಯಿರುವ ಈ ಚಿತ್ರವನ್ನು ಕಾತರದಿಂದ ಕಾಯುತ್ತಿರುವ ಸಿನೆಮಾರಸಿಕರಿಗೆ ಮನವನ್ನು ತಣಿಸಲಿದೆಯೆಂದು ಚಿತ್ರತಂಡ ಹೇಳಿಕೊಂಡಿದೆ. ವಿಶ್ವರೂಪಂ2, ಮೊದಲ ಭಾಗಕ್ಕಿಂತಲೂ ರೋಮಾಂಕಾರಿಯಾಗಿದೆ ಹಾಗೂ ಅದ್ಭುತವಾದ ದಶ್ಯಾನುಭವ ನೀಡುವುದರಲ್ಲಿ ಸಂದೇಹವಿಲ್ಲವೆಂದು ಸ್ವತಃ ಕಮಲ್, ಫೇಸ್‌ಬುಕ್‌ನಲ್ಲಿ ಹೇಳಿಕೊಂಡಿದ್ದಾರೆ.

ಹಾಗೆ ನೋಡಿದರೆ ವಿಶ್ವರೂಪಂ ಬಹಳ ಹಿಂದೆಯೇ ಬಿಡುಗಡೆಯಾಗಬೇಕಿತ್ತು. ಆದರೆ ನಿರ್ಮಾಣವೆಚ್ಚ ಸೇರಿದಂತೆ ಹಲವಾರು ತೊಡಕುಗಳನ್ನು ಎದುರಿಸಿದ್ದರಿಂದ ಚಿತ್ರದ ನಿರ್ಮಾಣ ಆಮೆಗತಿಯಲ್ಲಿ ಸಾಗಿತ್ತು. ಇದೀಗ ಈ ಎಲ್ಲಾ ಸಮಸ್ಯೆಗಳು ಬಗೆಹರಿದಿದ್ದು, ವಿಶ್ವರೂಪಂ2 ಬಿಡುಗಡೆಗೆ ರೆಡಿಯಾಗಿದೆ.

ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿ ತಯಾರಾಗಿರುವ ಈ ಚಿತ್ರದ ಟ್ರೇಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಹೆಚ್ಚುಕಮ್ಮಿ ವಿಶ್ವರೂಪಂನ ಮೊದಲ ಭಾಗದಲ್ಲಿ ನಟಿಸಿದ್ದ ಪ್ರಮುಖ ತಾರೆಯರು ಎರಡನೆ ಭಾಗದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ. ಕಮಲ್‌ಜೊತೆಗೆ ಪೂಜಾಕುಮಾರ್, ಆ್ಯಂಡ್ರಿಯಾ,ಶೇಖರ್ ಕಪೂರ್ ಹಾಗೂ ರಾಹುಲ್ ಬೋಸ್ ಮುಖ್ಯಪಾತ್ರಗಳಲ್ಲಿ ನಟಿಸಿರುವ ಈ ಚಿತ್ರವನ್ನು ಆಸ್ಕರ್ ರವಿಚಂದ್ರನ್ ನಿರ್ಮಿಸಿದ್ದಾರೆ. ವಿಶ್ವರೂಪಂ2ಗೆ ಸ್ವತಃ ಕಮಲ್ ಹಾಸನ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಮಧ್ಯೆ ರಜನಿ ಅಭಿನಯದ ಯಂದಿರನ್ 2.0 ಎಪ್ರಿಲ್‌ನಲ್ಲಿ ರಿಲೀಸ್ ಆಗಲಿರುವುದರಿಂದ ಬಾಕ್ಸ್‌ಆಫೀಸ್ ಸಮರವನ್ನು ತಪ್ಪಿಸುವುದಕ್ಕಾಗಿ ವಿಶ್ವರೂಪಂ2, ಅದಕ್ಕಿಂತ ಮುಂಚಿತವಾಗಿಯೇ ಬಿಡುಗಡೆಗೊಳ್ಳುವ ಸಾಧ್ಯತೆಯಿದೆಯಂತೆ. ಹಾಗಾದರೆ ವಿಶ್ವರೂಪಂ2, ಮೊದಲ ಭಾಗಕ್ಕಿಂತಲೂ ಅದ್ಭುತವಾಗಿ ಮೂಡಿಬಂದಿದೆಯೇ ಎಂಬುದನ್ನು ತಿಳಿಯಲು ಹೆಚ್ಚು ಸಮಯ ಕಾಯುವ ಅಗತ್ಯವಿಲ್ಲ ಎಂದಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X