ಉಡುಪಿ: ಮಕರ ಸಂಕ್ರಮಣದ ಮೂರು ರಥಗಳ ಉತ್ಸವ

ಉಡುಪಿ, ಜ.14: ಉಡುಪಿ ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ರವಿವಾರ ಮಕರ ಸಂಕ್ರಮಣದ ಪ್ರಯುಕ್ತ ಮೂರು ರಥಗಳ ಉತ್ಸವ ವೈಭವದಿಂದ ನಡೆಯಿತು.
ಪರ್ಯಾಯ ಪೇಜಾವರ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ, ಕೃಷ್ಣಾಪುರ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ, ಶಿರೂರು ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ, ಅದಮಾರು ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ, ಪೇಜಾವರ ಕಿರಿಯ ಯತಿ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕಾಣಿಯೂರು ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಸೋದೆ ಶ್ರೀವಿಶ್ವವಲ್ಲಭ ತೀರ್ಥ ಸ್ವಾಮೀಜಿ, ಮಂತ್ರಾಲಯದ ಶ್ರೀ ವಿಬುಧೇಂದ್ರ ತೀರ್ಥ ಸ್ವಾಮೀಜಿ, ರಾಮೋಹಳ್ಳಿಯ ಶ್ರೀವಿಶ್ವಭೂಷಣ ಸ್ವಾಮೀಜಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Next Story





