ಬಂಟಕಲ್: ರಾಷ್ಟ್ರೀಯ ಯುದಿನ ಆಚರಣೆ

ಶಿರ್ವ, ಜ.14: ಬಂಟಕಲ್ಲು ಮಧ್ವವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಯುವರೆಡ್‌ಕ್ರಾಸ್ ವಿಭಾಗ ಹಾಗೂ ರೋಟರ್ಯಾಕ್ಟ್ ಘಟಕಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದರ 155 ನೇ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಕಾಲೇಜಿನ ಆವರಣದಲ್ಲಿ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಇನ್ನಂಜೆ ಎಸ್‌ವಿಎಚ್ ಕಾಲೇಜಿನ ಆಂಗ್ಲ ಭಾಷಾ ಪ್ರಾಧ್ಯಾಪಕ ಪುಂಡರೀಕಾಕ್ಷ ಕೊಡಂಚ ಮಾತನಾಡಿದರು. ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ವಹಿಸಿದ್ದರು. ಸಂಯೋಜಕ ಕಿಶೋರ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂದೇಶ್ ಕುಮಾರ್ ವಂದಿಸಿದರು. ಅಂಜನ ಕಾರ್ಯಕ್ರಮ ನಿರೂಪಿಸಿದರು.
Next Story





