ನನ್ನ ಭಾರತ ಪ್ರವಾಸ ಅತ್ಯಂತ ಮಹತ್ವದ್ದಾಗಿದೆ : ಇಸ್ರೇಲ್ ಪ್ರಧಾನಿ ನೆತನ್ಯಾಹು

ಹೊಸದಿಲ್ಲಿ, ಜ.15: “ನನ್ನ ಭಾರತ ಪ್ರವಾಸ ಅತ್ಯಂತ ಮಹತ್ವದ್ದಾಗಿದೆ. ಪ್ರಧಾನಿ ನರೇಂದ್ರ ಮೋದಿ ನನಗೆ ಒಳ್ಳೆಯ ಸ್ನೇಹಿತರಾಗಿದ್ದಾರೆ” ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಭಿಪ್ರಾಯಪಟ್ಟಿದ್ದಾರೆ.
ಭಾರತಕ್ಕೆ ಆಗಮಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ರಾಷ್ಟ್ರಪತಿ ಭವನದ ಆವರಣದಲ್ಲಿ ಸೋಮವಾರ ಗೌರವ ವಂದನೆ ಸ್ವೀಕರಿಸಿದ ಬಳಿಕ ಹೇಳಿಕೆ ನೀಡಿದರು.
ನೇತನ್ಯಾಹು ಅವರಿಗೆ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಂಪ್ರದಾಯಿಕ ಸ್ವಾಗತ ಕೋರಿದರು.
15 ವರ್ಷಗಳ ಬಳಿಕ ಇಸ್ರೇಲ್ ಪ್ರಧಾನಿಯೊಬ್ಬರು ಭಾರತಕ್ಕೆ ಆಗಮಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಇಸ್ರೇಲ್ ಪ್ರಧಾನಿ ನೆತನ್ಯಾಹು ಭೇಟಿಯಾಗಲಿದ್ದಾರೆ.
Next Story