ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ

ಮಂಗಳೂರು, ಜ.15: ಹಿಂದೂಗಳ ಉತ್ಸವದ ಸಂದರ್ಭ ರೈಲು ಮತ್ತು ಬಸ್ಸಿನ ಬಾಡಿಗೆ ಏರಿಸುವುದನ್ನು ನಿಲ್ಲಿಸಬೇಕು ಮತ್ತು ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಹಿಂದೂ ಆಂದೋಲನವು ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಧರಣಿ ನಡೆಸಿತು.
27 ವರ್ಷಗಳಿಂದ ನ್ಯಾಯಕ್ಕಾಗಿ ಮೊರೆ ಇಡುವ ಕಾಶ್ಮೀರಿ ಹಿಂದೂಗಳಿಗೆ ನ್ಯಾಯ ನೀಡಬೇಕು. ಬಿಹಾರದಲ್ಲಿ ಅಲ್ಪಸಂಖ್ಯಾತ ಯುವಕರಿಗೆ ಉದ್ಯೋಗ ನೀಡಲು ಶೇ.5 ಬಡ್ಡಿದರದಲ್ಲಿ ನೀಡುವ ಸಾಲವನ್ನು ಸ್ಥಗಿತಗೊಳಿಸಬೇಕು ಎಂದು ಧರಣಿ ನಿರತರು ಒತ್ತಾಯಿಸಿದರು.
Next Story





