ಗೋವಾ ನೀರಾವರಿ ಸಚಿವ ಪಾಳೇಕರ್ ಆರೋಪ ಸುಳ್ಳು: ಸಚಿವ ಎಂ.ಬಿ.ಪಾಟೀಲ್

ಬೆಳಗಾವಿ, ಜ. 15: ರಾಜ್ಯದಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಕಳಸಾ-ಬಂಡೂರಿ ನಾಲಾ ಕಾಮಗಾರಿ ನಡೆಯುತ್ತಿದೆ ಎಂಬ ಗೋವಾ ನೀರಾವರಿ ಸಚಿವ ವಿನೋದ್ ಪಾಳೇಕರ್ ಹೇಳಿಕೆ ಸುಳ್ಳು. ಇಲ್ಲಿ ಯಾವುದೇ ಕಾಮಗಾರಿ ನಡೆದಿಲ್ಲ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಜಿಲ್ಲೆಯ ಕಣಕುಂಬಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಗೋವಾ ಸಚಿವ ಪಾಳೇಕರ್ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಗೋವಾ ಸಚಿವರು ಪರಿಶೀಲಿಸಿರುವುದು ಹಳೆಯ ಕಾಮಗಾರಿ. ಆಗಸ್ಟ್ ನಂತರ ಯಾವುದೇ ಕಾಮಗಾರಿ ಕೈಗೊಂಡಿಲ್ಲ ಎಂದರು.
ನಿರ್ಬಂಧ ಹೇರಬೇಕು:
‘ಗೋವಾ ಸಚಿವ ಪಾಳೇಕರ್ ಕಳಸಾ ಕಾಮಗಾರಿ ವೀಕ್ಷಣೆಗೆ ಬಂದಿರುವುದೇ ತಪ್ಪು. ವಿವಾದ ನ್ಯಾಯಮಂಡಳಿಯಲ್ಲಿ ಇರುವುದರಿಂದ ಈ ಸ್ಥಳಕ್ಕೆ ಬಾರದಂತೆ ನಿರ್ಬಂಧ ಹೇರಬೇಕು. ಶಾಂತಿ ಕದಡುವ ಕೆಲಸವನ್ನು ಗೋವಾ ಜಲಸಂಪನ್ಮೂಲ ಸಚಿವ ವಿನೋದ್ ಪಾಳೇಕರ್ ಮಾಡಿದ್ದಾರೆ’
-ಅಶೋಕ ಪಟ್ಟಣ ಸರಕಾರದ ಮುಖ್ಯ ಸಚೇತಕ
Next Story





