Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಕ್ರಾಂತಿಪುರುಷ : ನೆತನ್ಯಾಹು...

ಮೋದಿ ಕ್ರಾಂತಿಪುರುಷ : ನೆತನ್ಯಾಹು ಶ್ಲಾಘನೆ

ವಾರ್ತಾಭಾರತಿವಾರ್ತಾಭಾರತಿ15 Jan 2018 7:59 PM IST
share
ಮೋದಿ ಕ್ರಾಂತಿಪುರುಷ : ನೆತನ್ಯಾಹು ಶ್ಲಾಘನೆ

ಹೊಸದಿಲ್ಲಿ, ಜ.15:  ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಥಮ ಭಾರತೀಯ ಪ್ರಧಾನಿಯಾಗಿರುವ ನರೇಂದ್ರ ಮೋದಿ ನಿಜವಾಗಿಯೂ ಓರ್ವ ಕ್ರಾಂತಿಪುರುಷ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬಣ್ಣಿಸಿದ್ದಾರೆ.

ಭಾರತಕ್ಕೆ ಭೇಟಿ ನೀಡಿರುವ ನೆತನ್ಯಾಹು ದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಉಭಯ ನಾಯಕರ ಸಮ್ಮುಖದಲ್ಲಿ ಎರಡೂ ರಾಷ್ಟ್ರಗಳ ನಡುವೆ 9 ಸಹಕಾರ ಒಪ್ಪಂದಕ್ಕೆ ಸಹಿ ಹಾಕಲಾಯಿತು.

  ಬಳಿಕ ನಡೆದ ಜಂಟಿ ಸುದ್ದಿಗೋಷ್ಟಿಯಲ್ಲಿ ಮೋದಿ ಇಸ್ರೇಲ್ ಪ್ರಧಾನಿಯನ್ನು ‘ನನ್ನ ಸ್ನೇಹಿತ ಬಿಬಿ’ ಎಂದು ಪರಿಚಯಿಸಿದರೆ, ನೆತನ್ಯಾಹು ಭಾರತದ ಪ್ರಧಾನಿಯನ್ನು ‘ನರೇಂದ್ರ’ ಎಂದು ಉಲ್ಲೇಖಿಸಿ ತಮ್ಮಿಬ್ಬರ ನಡುವಿನ ಗಾಢಸ್ನೇಹದ ಪರಿಚಯ ಮಾಡಿಕೊಟ್ಟರು.

  ಭಾರತದಲ್ಲಿ ಈಗಿರುವ ಉದಾರ ಎಫ್‌ಡಿಐ (ವಿದೇಶಿ ನೇರ ಬಂಡವಾಳ) ವ್ಯವಸ್ಥೆಯ ಲಾಭ ಪಡೆದು ಭಾರತದಲ್ಲಿ ಹೆಚ್ಚಿನ ಉತ್ಪಾದನೆ ನಡೆಸುವಂತೆ ಪ್ರಧಾನಿ ಮೋದಿ ಇಸ್ರೇಲ್ ಕಂಪೆನಿಗಳಿಗೆ ಆಹ್ವಾನ ನೀಡಿದರು. ಮಾತುಕತೆ ಸಂದರ್ಭ ಭಾರತ-ಇಸ್ರೇಲ್ ಸಂಬಂಧದಲ್ಲಿ ಆಗಿರುವ ಮುನ್ನಡೆಯ ಅವಲೋಕನ ನಡೆಸಲಾಯಿತು ಎಂದು ಪ್ರಧಾನಿ ಮೋದಿ ತಿಳಿಸಿದರು.

“ನಿರೀಕ್ಷಿತ ಫಲಿತಾಂಶ ಲಭ್ಯವಾಗದಿದ್ದರೆ ನಾನು ತಾಳ್ಮೆ ಕಳೆದುಕೊಳ್ಳುತ್ತೇನೆ ಎಂದು ಹೇಳುತ್ತಾರೆ. ನೀವು ಕೂಡಾ ಇದೇ ರೀತಿಯ ವ್ಯಕ್ತಿ ಎಂಬುದು ಎಲ್ಲರಿಗೂ ತಿಳಿದಿದೆ. ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ನೀವು ಪಣತೊಟ್ಟಿದ್ದೀರಿ. ಇದೇ ರೀತಿ ಭಾರತದಲ್ಲಿ ನಾವು ಕಾರ್ಯಪ್ರವೃತ್ತರಾಗಿದ್ದೇವೆ” ಎಂದು ಇಸ್ರೇಲ್ ಪ್ರಧಾನಿಯನ್ನುದ್ದೇಶಿಸಿ ಮೋದಿ ಹೇಳಿದರು.

   “ಸಿನೆಮಾ ನಿರ್ಮಾಣದ ಕುರಿತು ಮಾಡಿಕೊಳ್ಳಲಾದ ಒಪ್ಪಂದದಿಂದ ರೋಮಾಂಚನಗೊಂಡಿದ್ದೇನೆ. ಬಾಲಿವುಡ್‌ಗೆ ನಾವು ಹೋಗುತ್ತೇವೆ ಎಂಬ ಕಾರಣದಿಂದ ನನ್ನ ಪತ್ನಿ ಮತ್ತು ನಾನು ಬಹಳ ಖುಷಿಯಾಗಿದ್ದೇವೆ” ಎಂದು ನೆತನ್ಯಾಹು ಹೇಳಿದರು. ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ-ಇಸ್ರೇಲ್ ಮಧ್ಯೆ ಮಾಡಿಕೊಳ್ಳಲಾದ ಒಪ್ಪಂದವನ್ನು ಉಲ್ಲೇಖಿಸಿದ ನೆತನ್ಯಾಹು, ಇಸ್ರೇಲ್ ಹೊಸಶೋಧದಲ್ಲಿ ಸದಾ ಮುಂದಿದ್ದರೆ ಭಾರತವು ಅಗಾಧ ಪ್ರತಿಭೆಗಳನ್ನು ಹೊಂದಿದೆ . ಇಸ್ರೇಲ್‌ನಲ್ಲಿ ನಾವು ಕಡಿಮೆ ಬಳಕೆಯಿಂದ ಹೆಚ್ಚಿನ ಸಾಧನೆ, ಕಡಿಮೆ ನೀರಿನಿಂದ ಹೆಚ್ಚಿನ ಬೆಳೆ, ಕಡಿಮೆ ಹಣದಿಂದ ಹೆಚ್ಚಿನ ವಿದ್ಯುಚ್ಛಕ್ತಿ ಉತ್ಪಾದಿಸುತ್ತೇವೆ ಎಂದು ಹೇಳಿದರು.

ಮೋದಿಯೊಂದಿಗೆ ಯೋಗಾಭ್ಯಾಸ ನಡೆಸುವ ಆಸಕ್ತಿ ವ್ಯಕ್ತಪಡಿಸಿದ ನೆತನ್ಯಾಹು, “ನನ್ನೊಂದಿಗೆ ಯೋಗ ತರಗತಿ ನಡೆಸಬೇಕೆಂದಾಗ ಹೇಳಿ. ಖಂಡಿತಾ ಆಗಮಿಸುತ್ತೇನೆ” ಎಂದರು. ಜೆರುಸಲೇಂ ನಗರವನ್ನು ಇಸ್ರೇಲ್ ರಾಜಧಾನಿ ಎಂದು ಘೋಷಿಸುವ ಅಮೆರಿಕದ ಅಧ್ಯಕ್ಷ ಟ್ರಂಪ್ ನಿಲುವನ್ನು ವಿಶ್ವಸಂಸ್ಥೆಯಲ್ಲಿ ಭಾರತ ವಿರೋಧಿಸಿದ ವಿಷಯ ಮಾತುಕತೆಯಲ್ಲಿ ಪ್ರಸ್ತಾಪವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X