ಗೋವಾ ಸಚಿವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಒತ್ತಾಯ
ಬೆಂಗಳೂರು, ಜ. 15: ‘ಕರ್ನಾಟಕದವರು ಹರಾಮಿಗಳು’ ಎಂಬ ಉದ್ಧಟತನದ ಹೇಳಿಕೆ ನೀಡಿರುವ ಗೋವಾ ಸರಕಾರದ ಜಲ ಸಂಪನ್ಮೂಲ ಸಚಿವ ವಿನೋದ್ ಪಾಲೇಕರ್ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಕನ್ನಡ ಗೆಳೆಯರ ಬಳಗ ಒತ್ತಾಯಿಸಿದೆ.
ಗೋವಾ ರಾಜ್ಯಪಾಲರು ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಸಚಿವ ವಿನೋದ್ ಪಾಲೇಕರ್ ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಮುಖ್ಯ ಮಂತ್ರಿಗಳಿಗೆ ಸೂಚಿಸಬೇಕು. ಅಲ್ಲದೇ ಅವರ ವಿರುದ್ಧ ಕ್ರಿಮಿನಲ್ ಮೊಕದ್ಧಮೆ ದಾಖಲಿಸಬೇಕು. ಜವಾಬ್ಧಾರಿಯುತ ಸ್ಥಾನದಲ್ಲಿರುವವರು ಇಂತಹ ಮಾತುಗಳನ್ನಾಡಿದರೆ ದೇಶದ ಒಕ್ಕೂಟ ವ್ಯವಸ್ಥೆ, ರಾಜ್ಯಗಳ ನಡುವಿನ ಸೌಹಾರ್ದ ಸಂಬಂಧಗಳನ್ನು ಹಾಳು ಮಾಡುತ್ತವೆ. ಆದ್ದರಿಂದ ಈ ಘಟನೆ ಸಂಬಂಧ ಕರ್ನಾಟಕ ಸರಕಾರ ಕೇಂದ್ರಕ್ಕೆ ಪತ್ರ ಬರೆಯಬೇಕೆಂದು ಕರ್ನಾಟಕ ಗೆಳೆಯರ ಬಳಗ ಪ್ರಕಟನೆ ತಿಳಿಸಿದೆ.
Next Story





