Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊನ್ನಾಳಿ: ಶ್ರೀ ಗುರು ಸಿದ್ದರಾಮೇಶ್ವರರ...

ಹೊನ್ನಾಳಿ: ಶ್ರೀ ಗುರು ಸಿದ್ದರಾಮೇಶ್ವರರ 845ನೇ ಜಯಂತಿ

ವಾರ್ತಾಭಾರತಿವಾರ್ತಾಭಾರತಿ15 Jan 2018 9:04 PM IST
share
ಹೊನ್ನಾಳಿ: ಶ್ರೀ ಗುರು ಸಿದ್ದರಾಮೇಶ್ವರರ 845ನೇ ಜಯಂತಿ

ಹೊನ್ನಾಳಿ,ಜ.15: ಶಾಂತಿ, ಸಮನ್ವಯತೆ ಕುರಿತು ಪಾಠ ಮಾಡುವ ಬುದ್ದಿಜೀವಿಗಳು ಮೊದಲು ನಮ್ಮ ಇತಿಹಾಸದ ಬಗ್ಗೆ ತಿಳಿದಿರಬೇಕು ಕೇಂದ್ರ ಕೌಶಲ್ಯಾಭಿವೃದ್ದಿ ಸಚಿವ ಅನಂತ್ ಕುಮಾರ ಹೆಗಡೆ ಹೇಳಿದರು. 

ಇಲ್ಲಿನ ಶ್ರೀ ಮೃತ್ಯುಂಜಯ ಶಿವಾಚಾರ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಶ್ರೀಗುರುಸಿದ್ದರಾಮೇಶ್ವರರ 845ನೇ ಜಯಂತಿ ಕಾರ್ಯಕ್ರಮದಲ್ಲಿ ಮಹಿಳಾಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಗತ್ತಿನ ಪ್ರತಿಯೊಂದು ಮೂಲೆ ಮೂಲೆಯಲ್ಲಿಯೂ ನಮ್ಮ ಧರ್ಮ ಧ್ವಜ ಹಾರಾಡುತ್ತಿದೆ. ಆದರೆ, ಅದಕ್ಕಾಗಿ ಒಂದೇ ಒಂದು ಹನಿ ರಕ್ತ ನಾವು ನೆಲಕ್ಕೆ ಚೆಲ್ಲಿರಲಿಲ್ಲ. ನಮ್ಮ ಸಂಸ್ಕೃತಿ, ನಡವಳಿಕೆ, ಆಚಾರ, ವಿಚಾರದ ಆಧಾರದ ಮೇಲೆ ಜಗತ್ತೆ ನಮ್ಮತ್ತ ಆಕರ್ಷಿತವಾಗಿದೆ. ಆದರೆ, ಇಂದಿನ ಸಮಾಜದಲ್ಲಿ ಜಾತಿಯತೆ ಹೆಚ್ಚಾಗುತ್ತಿದೆ. ನೋಡುವ ದೃಷ್ಟಿಯೂ ಬದಲಾಗುತ್ತಿದೆ. ವಿಕೃತ ಮನಸ್ಸುಗಳನ್ನು ಹೆಚ್ಚು ನಂಬುವಂತ ಸ್ಥಿತಿ ನಿರ್ಮಾಣವಾಗಿದೆ ಎಂದರು.
ಈ ಮೊದಲು ಸಮಸಮಾಜವಿತ್ತು. ಹಿಂದೆ ಬಸವಣ್ಣನವರು ಜಾತಿ ರಹಿತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು. ಆದರೆ, ವಿಪರ್ಯಾಸವೆಂದರೆ ಇಂದು ಅವರನ್ನೇ ಜಾತಿಗೆ ಸೀಮಿತಗೊಳಿಸಲಾಗಿದೆ. ಬುದ್ದಿಜೀವಿಗಳು ಎನ್ನಿಸಿಕೊಳ್ಳುವ ಕೆಲವರ ತಲೆಯಲ್ಲಿ ಏನು ಇರುವುದಿಲ್ಲ. ಆದರೆ, ಅವರು ಬುದ್ದಿವಂತರೆನಿಸಿಕೊಂಡಿದ್ದಾರೆ. ಅವರಿಗೆ ಈ ಮಣ್ಣಿನ ಅರಿವು ಇಲ್ಲದಿರುವುದರಿಂದ ಈ ರೀತಿ ಮಾತನಾಡುತ್ತಾರೆ ಎಂದರು.

1905 ರಲ್ಲಿ ರೈಟ್ಸ್ ಸಹೋದರರು ವಿಮಾನ ಕಂಡು ಹಿಡಿದರು ಎಂದು ಹೇಳುತ್ತಾರೆ. ಆದರೆ, ವಿಮಾನವನ್ನು 1895ರಲ್ಲಿ ಮುಂಬಯಿಯ ಭಾರತೀಯರೊಬ್ಬರು ಕಂಡು ಹಿಡಿದಿದ್ದು. ಇದನ್ನು ಯಾವ ಇತಿಹಾಸದಲ್ಲಿ ಹೇಳಿಲ್ಲ. ಯೋಚನೆ ಮಾಡದೆ ಒಪ್ಪಿಕೊಳ್ಳುತ್ತಿದ್ದೇವೆ. ಆದರೆ, ಸತ್ಯ ಹೇಳುವ ಇತಿಹಾಸ ನಮಗೆ ಬೇಕಿದೆ. ಅವರವರ ಮೂಗಿನ ನೇರಕ್ಕೆ ಬರೆದಿರುವ ಇತಿಹಾಸ ನಮಗೆ ಬೇಡ ಎಂದರು.

ನೊಳಂಬ ವೀರಶೈವ ಸಮಾಜದ ರಾಜ್ಯಾಧ್ಯಕ್ಷ ನಾಗರಾಜ್, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಸ್ವಾಗತ ಸಮಿತಿ ಅಧ್ಯಕ್ಷ ರುದ್ರೆಗೌಡ, ಮೋಹನ್‍ಕುಮಾರ್, ರಾಮಲಿಂಗಪ್ಪ, ಎಸ್.ಆರ್. ಪಾಟೀಲ್, ಮಾದೇನಹಳ್ಳಿ ನಾಗರಾಜ್, ಎಸ್.ಎ. ಹುಡೇದ್, ಶಾಂತರಾಜ್‍ಪಾಟೀಲ್ ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X