ಬಸ್- ಬೈಕ್ ಢಿಕ್ಕಿ: ಸವಾರ ಮೃತ್ಯು, ಮೂವರಿಗೆ ಗಾಯ

ಕಾರ್ಕಳ, ಜ.15: ಬಸ್ಸೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು, ಇಬ್ಬರು ಮಕ್ಕಳು ಸಹಿತ ಮೂವರು ಗಾಯಗೊಂಡ ಘಟನೆ ಕುಕ್ಕುಂದೂರು ಗ್ರಾಮದ ಪಿಲಿಚಂಡು ಬಸ್ಸು ನಿಲ್ದಾಣದ ಬಳಿ ಜ.14ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ವರಂಗ ನಿವಾಸಿ ರಾಘವೇಂದ್ರ(38) ಎಂದು ಗುರುತಿಸಲಾಗಿದೆ. ಸಹಸವಾರರಾದ ಮೃತರ ಪತ್ನಿ ಸುಮತಿ(35), ಮಕ್ಕಳಾದ ಭಾಗ್ಯಶ್ರೀ(4), ಕಾವ್ಯ(2) ಎಂಬವರು ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೂಲಿ ಕಾರ್ಮಿಕರಾಗಿರುವ ರಾಘವೇಂದ್ರ ತನ್ನ ಕುಟುಂಬದವರೊಂದಿಗೆ ಬೈಕಿನಲ್ಲಿ ಕಾರ್ಕಳ ಕಡೆಯಿಂದ ಬೈಲೂರು ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಬಸ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ರಾಘವೇಂದ್ರ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





