ನಾಪತ್ತೆಯಾಗಿದ್ದ ಪ್ರವೀಣ್ ತೊಗಾಡಿಯ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ

ಹೊಸದಿಲ್ಲಿ, ಜ.15: ನಾಪತ್ತೆಯಾಗಿದ್ದ ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರವೀಣ್ ತೊಗಾಡಿಯಾ ಅಹ್ಮದಾಬಾದ್ ನ ಶಹಿಬಾಗ್ ಪ್ರದೇಶದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಅವರನ್ನು ಚಂದ್ರಮಣಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಹ್ಮದಾಬಾದ್ ಕ್ರೈಂ ಬ್ರಾಂಚ್ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತೊಗಾಡಿಯಾರನ್ನು ಆಸ್ಪತ್ರೆಗೆ ಕರೆತರಲಾಗಿದೆ ಎಂದು ಚಂದ್ರಮಣಿ ಆಸ್ಪತ್ರೆಯ ನಿರ್ದೇಶಕ ರೂಪ್ ಕುಮಾರ್ ಅಗರ್ವಾಲ್ ಸ್ಪಷ್ಟಪಡಿಸಿದ್ದಾರೆ.
"ಅವರು ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ಪ್ರಜ್ಞಾವಸ್ಥೆಗೆ ಮರಳುತ್ತಿದ್ದಾರೆ . ಆದರೆ ಯಾವುದೇ ಹೇಳಿಕೆ ನೀಡುವ ಸ್ಥಿತಿಯಲ್ಲಿ ಅವರಿಲ್ಲ" ಎಂದು ಅಗರ್ವಾಲ್ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
Next Story