Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಪ್ರದಾಯಗಳಿಗಿಂತ ಮನುಷ್ಯ ಸಂಬಂಧಗಳು...

ಸಂಪ್ರದಾಯಗಳಿಗಿಂತ ಮನುಷ್ಯ ಸಂಬಂಧಗಳು ಮುಖ್ಯ: ಸಾಹಿತಿ ಎನ್. ನಾಗಪ್ಪ

ವಾರ್ತಾಭಾರತಿವಾರ್ತಾಭಾರತಿ16 Jan 2018 7:26 PM IST
share
ಸಂಪ್ರದಾಯಗಳಿಗಿಂತ ಮನುಷ್ಯ ಸಂಬಂಧಗಳು ಮುಖ್ಯ: ಸಾಹಿತಿ ಎನ್. ನಾಗಪ್ಪ

ತುಮಕೂರು.ಜ.16:ಸಮಾಜದಲ್ಲಿ ಮಾನವ ಸಂಬಂಧಗಳನ್ನು ಒಡೆಯುವ ಮನಸ್ಸುಗಳು ಹೆಚ್ಚಾಗುತ್ತಿವೆ ಎಂದು ಸಾಹಿತಿ ಎನ್.ನಾಗಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.

ತುಮಕೂರಿನ ಕುವೆಂಪು ನಗರದ ಮುಖ್ಯ ವೃತ್ತದ ಸಮೀಪವೇ ಇರುವ ಓ.ಕೆ.ಹೇರ್‍ಡ್ರೆಸಸ್‍ನಲ್ಲಿ ಸಾಹಿತಿ ಈಚನೂರು ಇಸ್ಮಾಯಿಲ್ ಅವರು ರಚಿಸಿರುವ “ಇದೇನು ನೀವಿಲ್ಲಿ”, “ಇಬ್ಲಾರು”, “ವಿಷಾದದ ಎದುರು ಖಿನ್ನತೆಯ ಮುಖಾಮುಖಿ” ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡುತಿದ್ದ ಅವರು, ಜೀವನದಲ್ಲಿ ಸಂಪ್ರದಾಯಗಳಿಗಿಂತ ಮಾನವ ಸಂಬಂಧಗಳೇ ಮುಖ್ಯವಾಗುತ್ತವೆ. ಹೀಗಾಗಿ ಇಂತಹ ಸಂಬಂಧಗಳು ವೃದ್ಧಿಯಾಗಬೇಕು ಎಂದು ಹೇಳಿದರು. 

ತೆಲುಗು ಸಾಹಿತ್ಯದ ದಿಗ್ಗಜರಾದ ಶ್ರೀ ಗದ್ದರ್ ಸೇರಿದಂತೆ ಜನಚಳವಳಿಯ ಪ್ರಮುಖರು ವೇಶ್ಯೆಗೆ ಸಂಬಂಧಿಸಿದ ಪುಸ್ತಕವನ್ನು ವೇಶ್ಯೆಯಿಂದಲೇ ಬಿಡುಗಡೆ ಮಾಡಿಸಿ ಸಂಪ್ರದಾಯವನ್ನು ಮುರಿದರು. ಅದೇ ರೀತಿ ಚಿಕ್ಕನಾಯಕನಹಳ್ಳಿಯಲ್ಲಿ ಸುಪ್ರೀಂ ಸುಬ್ಬಣ್ಣ ಅವರ ಸೆಲೂನ್‍ನಲ್ಲಿ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮಗಳು ನಡೆದಿವೆ. ತುಮಕೂರಿನ ಸೆಲೂನ್‍ನಲ್ಲಿ ಪುಸ್ತಕಗಳನ್ನು ಬಿಡುಗಡೆಗೊಳಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಪುಸ್ತಕ ಪ್ರೀತಿ,ಓದುವ ಪ್ರೀತಿ ಬಹು ಮುಖ್ಯ. ಮಹಾನ್ ಸಾಹಿತಿಗಳ ಕೃತಿಗಳು ಸೇರಿದಂತೆ ಒಳ್ಳೆಯ ಸಾಹಿತ್ಯವನ್ನು ಓದುವುದರಿಂದ ಮನುಷ್ಯನಲ್ಲಿ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿ ಬದಲಾಗುವಂತೆ ಮಾಡುವ ಶಕ್ತಿ ಇದೆ. ಗ್ರಾಮೀಣ ಪ್ರದೇಶದ ಜನರು ಹೀಗೆ ಓದುವ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬಹುದು. ಈಚನೂರು ಇಸ್ಮಾಯಿಲ್ ಕೃತಿಗಳಲ್ಲಿ ಇಂತಹ ಒಳ್ಳೆಯ ಅಂಶಗಳಿವೆ ಎಂದು ತಿಳಿಸಿದರು.

ಕನ್ನಡ ಉಪನ್ಯಾಸಕ ವೆಂಕಟರೆಡ್ಡಿರಾಮರೆಡ್ಡಿ ಕೃತಿಗಳ ಕುರಿತು ಮಾತನಾಡಿ,ಇತಿಹಾಸವನ್ನು ಮುರಿದು ಕಟ್ಟಬೇಕು.ಇಂತಹ ಕೆಲಸ ಹಿಂದಿನಿಂದಲೂ ನಿರಂತವಾಗಿ ನಡೆದುಕೊಂಡು ಬಂದಿದೆ. ಬುದ್ದ, ಬಸವ ಸೇರಿದಂತೆ ಹಲವರು ಇತಿಹಾಸದಲ್ಲಿ ಹೊಸ ಚಿಂತನೆಗಳನ್ನು ಹುಟ್ಟುಹಾಕಿದ್ದಾರೆ.ಈಚನೂರು ಇಸ್ಮಾಯಿಲ್ ನಾಟಕಗಳಲ್ಲಿ ಪ್ರೀತಿ, ಭ್ರಾತೃತ್ವ, ಸಹಬಾಳ್ವೆ ಪ್ರಮುಖ ಆಶಯವಾಗಿದೆ. ಆದರೆ ಸಂಭಾಷಣೆ ಸುದೀರ್ಘವಾಗಿದ್ದು,ಇವುಗಳನ್ನು ರಂಗಕ್ಕೆ ಅಳವಡಿಸಿದರೆ ಸಮಸ್ಯೆಗಳು ಎದುರಾಗುತ್ತವೆ. ಸಂಭಾಷಣೆ ಸುದೀರ್ಘವಾಗಿದ್ದು ನಟರು ಹೇಳುವುದಕ್ಕೆ ಕಷ್ಟವಾಗುತ್ತದೆ. ಆದ್ದರಿಂದ ಸಂಭಾಷಣೆ ಚಿಕ್ಕದಾಗಿದ್ದರೆ ಉತ್ತಮವಾಗಿರುತ್ತಿತ್ತು ಎಂದು ಹೇಳಿದರು.

ತುಮಕೂರು ವಿಶ್ವವಿದ್ಯಾಲಯದ ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಗುಂಡೂರ ಮಾತನಾಡಿ,ವೃತ್ತಿಯಲ್ಲಿ ಸಾಕಷ್ಟು ಅನುಭವ ಇರಬೇಕು. ಆ ಅನುಭವ ಕೆಲಸದಲ್ಲಿ ವ್ಯಕ್ತವಾಗಬೇಕು. ಅದು ಮನುಷ್ಯನನ್ನು ದೊಡ್ಡ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಮೂರು ಕೃತಿಗಳ ಲೇಖಕ ಈಚನೂರು ಇಸ್ಮಾಯಿಲ್ ತಮ್ಮ ಅನುಭವಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಓ.ಕೆ.ಹೇರ್‍ಡ್ರೆಸಸ್‍ನ ಓ.ಕೆ.ರಾಜು, ರಂಗಭೂಮಿ ಹಿರಿಯ ಕಲಾವಿದ ಗುಬ್ಬಿ ಪ್ರಕಾಶ್,ನಿವೃತ್ತ ಪ್ರಾಂಶುಪಾಲ ಜಯರಾಮ್, ನಾರಾಯಣಪ್ಪ ಸಮುದಾಯದ ಜಿಲ್ಲಾ ಕಾರ್ಯದರ್ಶಿ ಕೆ.ಈ.ಸಿದ್ದಯ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X