Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೋದರನ ಸಾವಿಗೆ ನ್ಯಾಯ ಕೋರಿ 767...

ಸೋದರನ ಸಾವಿಗೆ ನ್ಯಾಯ ಕೋರಿ 767 ದಿನಗಳಿಂದ ಹೋರಾಟ: ಹೈಕೋರ್ಟ್ ಮೆಟ್ಟಿಲೇರಿದ ಯುವಕ

ವಾರ್ತಾಭಾರತಿವಾರ್ತಾಭಾರತಿ16 Jan 2018 7:35 PM IST
share
ಸೋದರನ ಸಾವಿಗೆ ನ್ಯಾಯ ಕೋರಿ 767 ದಿನಗಳಿಂದ ಹೋರಾಟ: ಹೈಕೋರ್ಟ್ ಮೆಟ್ಟಿಲೇರಿದ ಯುವಕ

ತಿರುವನಂತಪುರ,ಜ.16: 2014ರಲ್ಲಿ ತನ್ನ ಸೋದರ ಶ್ರೀಜೀವ ಕಸ್ಟಡಿ ಸಾವಿನ ಪ್ರಕರಣವನ್ನು ಸಿಬಿಐ ಕೈಗೆತ್ತಿಕೊಳ್ಳುವವರೆಗೆ ತನ್ನ ಆಮರಣಾಂತ ನಿರಶನವನ್ನು ಮುಂದುವರಿಸುವುದಾಗಿ ಕಳೆದ 767 ದಿನಗಳಿಂದ ಇಲ್ಲಿಯ ಸಚಿವಾಲಯ ಕಟ್ಟಡದ ಹೊರಗೆ ಪ್ರತಿಭಟನೆಯನ್ನು ನಡೆಸುತ್ತಿರುವ ಶ್ರೀಜಿತ್ ಹೇಳಿದ್ದಾರೆ.

ಶ್ರೀಜಿತ್(29) ಪ್ರತಿಭಟನೆಯ ಕುರಿತು ಸಾಮಾಜಿಕ ಮಾಧ್ಯಮಗಳಿಂದ ತಿಳಿದುಕೊಂಡಿರುವ ನೂರಾರು ಜನರು ಅವರಿಗೆ ಬೆಂಬಲವಾಗಿ ನಿಂತಿದ್ದಾರೆ. ಶ್ರೀಜಿತ್ ಜೊತೆ ಸರದಿ ಉಪವಾಸವನ್ನೂ ಅವರು ಆರಂಭಿಸಿದ್ದಾರೆ. ಇದೇ ವೇಳೆ ಶ್ರೀಜಿತ್ ಕೈಗೊಂಡಿರುವ ಆಮರಣಾಂತ ನಿರಶನ ಮಂಗಳವಾರ 38ನೇ ದಿನಕ್ಕೆ ಕಾಲಿರಿಸಿದೆ.

ಶ್ರೀಜಿತ್ ತಾಯಿ ರಮಣಿ ಪ್ರಮೀಳಾ(50) ಅವರು ಇಂದು ಉಚ್ಚ ನ್ಯಾಯಾಲಯದಲ್ಲಿ ಅರ್ಜಿಯೊಂದನ್ನು ಸಲ್ಲಿಸಿ, ಶ್ರೀಜಿವ್ ಕಸ್ಟಡಿ ಸಾವಿನ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಆದೇಶಿಸುವಂತೆ ಕೋರಿದ್ದಾರೆ. ‘‘ನನ್ನ ಈ ಮಗನನ್ನೂ ಕಳೆದುಕೊಳ್ಳುವ ಭೀತಿ ನನ್ನನ್ನು ಕಾಡುತ್ತಿದೆ. ಈಗ ಇಷ್ಟೆಲ್ಲ ಬೆಂಬಲ ದೊರಕಿದ ಬಳಿಕವಷ್ಟೇ ನ್ಯಾಯ ದೊರೆಯುತ್ತದೆ ಎಂಬ ಭರವಸೆ ಮೂಡಿದೆ. ನಾವು ಸಿಬಿಐ ತನಿಖೆಗೆ ಆಗ್ರಹಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಸುಳ್ಳು ಕಳವು ಪ್ರಕರಣದಲ್ಲಿ ತನ್ನ ಸೋದರನನ್ನು ಬಂಧಿಸಲಾಗಿತ್ತು ಮತ್ತು ಆತ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆಗೆ ಬಲಿಯಾಗಿದ್ದಾನೆ ಎಂದು ಹೇಳಿದ ಶ್ರೀಜಿತ್, ಪೊಲೀಸ್‌ರೋರ್ವರ ಸಂಬಂಧಿ ಯುವತಿಯೊಂದಿಗೆ ತನ್ನ ಸೋದರ ನಿಕಟವಾಗಿದ್ದ. ಆತನಿಗೆ ಚಿತ್ರಹಿಂಸೆ ನೀಡಿದ್ದ ಪೊಲೀಸರು ತಮ್ಮ ಅಪರಾಧವನ್ನು ಮುಚ್ಚಿಡಲು ಕಥೆಯೊಂದನ್ನು ಹುಟ್ಟಿಸಿದ್ದಾರೆ ಮತ್ತು ಸುಳ್ಳು ಸಾಕ್ಷವನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಿದರು.

ಆದರೆ ಬಂಧನವಾದ ಬಳಿಕ ಶ್ರೀಜೀವ್ ತನ್ನ ಒಳಉಡುಪಿನಲ್ಲಿ ಬಚ್ಚಿಟ್ಟುಕೊಂಡಿದ್ದ ವಿಷವನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಪೊಲೀಸರು ಪ್ರತಿಪಾದಿಸುತ್ತಿದ್ದಾರೆ.

ಆತ ಡೆತ್ ನೋಟ್ ಬರೆದಿದ್ದು, ಕೈಬರಹವನ್ನು ವಿಧಿವಿಜ್ಞಾನ ತಜ್ಞರು ದೃಢಪಡಿಸಿದ್ದಾರೆ. ಕಸ್ಟಡಿಯಲ್ಲಿ ಚಿತ್ರಹಿಂಸೆಯಿಂದ ಗಾಯಗಳ ಬಗ್ಗೆ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಯಾವುದೇ ಉಲ್ಲೇಖವಿಲ್ಲ. ಶ್ರೀಜೀವ್‌ನನ್ನು ಆಸ್ಪತ್ರೆಗೆ ಒಯ್ದಾಗ ಆತ ತಾನು ಸೇವಿಸಿದ್ದ ವಿಷದ ಹೆಸರನ್ನು ವೈದ್ಯರಿಗೆ ತಿಳಿಸಿದ್ದ ಎಂದು ಉನ್ನತ ಪೊಲೀಸ್ ಮೂಲಗಳು ತಿಳಿಸಿದವು. ಕಾರ್ಬೊಫುರಾನ್ ವಿಷದಿಂದ ಸಾವು ಸಂಭವಿಸಿದೆ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆದರೆ 2016ರಲ್ಲಿ ಪೊಲೀಸ್ ದೂರು ಪ್ರಾಧಿಕಾರವು ಕಸ್ಟಡಿ ಚಿತ್ರಹಿಂಸೆಯಿಂದ ಸಾವಿಗೆ ಪೊಲೀಸರು ಹೊಣೆಯಾಗಿದ್ದಾರೆ ಎಂದು ಹೇಳಿತ್ತು.

 ಶ್ರೀಜೀವ್‌ಗೆ ನ್ಯಾಯ ದೊರೆಯಬೇಕು. ಉಚ್ಚ ನ್ಯಾಯಾಲಯದ ಉಸ್ತುವಾರಿಯಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ನಾವು ಬಯಸಿದ್ದೇವೆ ಎಂದು ಶ್ರೀಜಿತ್ ಹೋರಾಟದಲ್ಲಿ ಕೈ ಜೋಡಿಸಿರುವ ಅಖಿಲ್ ಥಾಮಸ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X