Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚುನಾವಣಾ ಪ್ರಕ್ರಿಯೆ : ರಾಜಕೀಯ...

ಚುನಾವಣಾ ಪ್ರಕ್ರಿಯೆ : ರಾಜಕೀಯ ಪಕ್ಷಗಳಿಗೆ ಡಿ.ಸಿ. ಮನವಿ

ಮಂಗಳೂರು : ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರ್ವ ಪಕ್ಷಗಳ ಸಭೆ

ವಾರ್ತಾಭಾರತಿವಾರ್ತಾಭಾರತಿ16 Jan 2018 7:59 PM IST
share
ಚುನಾವಣಾ ಪ್ರಕ್ರಿಯೆ : ರಾಜಕೀಯ ಪಕ್ಷಗಳಿಗೆ ಡಿ.ಸಿ. ಮನವಿ

ಮಂಗಳೂರು, ಜ.16: ಮುಂಬರುವ ವಿಧಾನಸಭಾ ಕ್ಷೇತ್ರದ ಚುನಾವಣಾ ಹಿನ್ನೆಲೆಯಲ್ಲಿ ಚುನಾವಣಾ ಪೂರ್ವ ಪ್ರಾಥಮಿಕ ಪ್ರಕ್ರಿಯೆಗಳು ಈಗಾಗಲೇ ಆರಂಭಗೊಂಡಿದೆ. ಈ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಸರ್ವಪಕ್ಷಗಳ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮುಂಬರುವ ಚುನಾವಣೆ ಮುಕ್ತ ಹಾಗೂ ನ್ಯಾಯ ಸಮ್ಮತ ರೀತಿಯಲ್ಲಿ ನಡೆಸಲು ಚುನಾವಣಾ ಆಯೋಗ ಕಟಿಬದ್ಧವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ರಾಜಕೀಯ ಪಕ್ಷಗಳು ತಮ್ಮ ಪರವಾಗಿ ಜಿಲ್ಲಾಡಳಿತದೊಂದಿಗೆ ವ್ಯವಹರಿಸಲು ಜವಾಬ್ದಾರಿಯುತ ವ್ಯಕ್ತಿಯನ್ನು ನೇಮಿಸಬೇಕು. ಚುನಾವಣಾ ಆಯೋಗ ಆಗಿಂದಾಗ್ಗೆ ಹೊರಡಿಸುವ ಆದೇಶ, ಸುತ್ತೋಲೆಗಳನ್ನು ಇವರ ಮೂಲಕ ರಾಜಕೀಯ ಪಕ್ಷಗಳಿಗೆ ತಿಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಈ ಸಲ ವಿಧಾನಸಭಾ ಚುನಾವಣೆಯಲ್ಲಿ ಇವಿಎಂ ಯಂತ್ರಗಳೊಂದಿಗೆ ವಿವಿ ಪ್ಲಾಟ್‌ಗಳನ್ನು ಬಳಸಲಾಗುವುದು. ಈ ಪ್ಲಾಟ್‌ಗಳಲ್ಲಿ ಮತದಾರನು ತಾನು ಯಾರಿಗೆ ಮತದಾನ ಮಾಡಿದ್ದೇನೆ ಎಂಬ ವಿವರ ಮುದ್ರಣವಾಗಿ ಬರುತ್ತದೆ. ಆದರೆ ಕೇವಲ 2 ಸೆಕೆಂಡ್‌ಗಳು ಮಾತ್ರ ಈ ವಿವರ ಗೋಚರವಾಗಲಿದ್ದು, ಬಳಿಕ ಅದು ಬಾಕ್ಸ್‌ನೊಳಗೆ ಹೋಗಲಿದೆ. ಇದರಿಂದ ಮತದಾರನಿಗೆ ಖಚಿತ ವಿವರ ತಿಳಿಯಲಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಮತದಾರರ ಪಟ್ಟಿಗೆ ಹೆಸರು ಸೇರಿಸಲು, ಬದಲಾಯಿಸಲು ಹಾಗೂ ತಿದ್ದುಪಡಿ ಮಾಡಲು ಜ.22 ರವರೆಗೆ ಕಾಲಾವಕಾಶ ಇದೆ. ಮತದಾರರು ಹಾಗೂ ರಾಜಕೀಯ ಪಕ್ಷಗಳು ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲಿಸಬೇಕು. ಇದರಿಂದ ಚುನಾವಣೆ ದಿವಸ ಉಂಟಾಗುವ ಗೊಂದಲ ಪರಿಹಾರವಾಗಲಿದೆ ಎಂದು ಸಸಿಕಾಂತ್ ಸೆಂಥಿಲ್ ಹೇಳಿದರು.

ಮತದಾರರ ಪಟ್ಟಿ ಪರಿಷ್ಕರೆಣೆಗೆ ಬೂತ್ ಮಟ್ಟದ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸಬೇಕು. ಇಲ್ಲವಾದರೆ ಅಂಥವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಸಾರ್ವಜನಿಕ ಪ್ರದೇಶದಲ್ಲಿ ಬ್ಯಾನರ್, ಬಂಟಿಂಗ್ಸ್ ಹಾಕುವುದನ್ನು ನಿಯಂತ್ರಿಸಬೇಕು. ಇದರಿಂದ ಯಾವುದೇ ರೀತಿ ಅಹಿತಕರ ಘಟನೆ ನಿಯಂತ್ರಣವಾಗುವುದಲ್ಲದೆ, ರಾಜಕೀಯ ಪಕ್ಷಗಳಿಗೆ ಮತ್ತು ಅಭ್ಯರ್ಥಿಗಳಿಗೆ ಖರ್ಚು ವೆಚ್ಚ ಉಳಿತಾಯವಾಗುತ್ತದೆ ಎಂದು ಅವರು ಹೇಳಿದರು.

ಚುನಾವಣಾ ಸಂದರ್ಭದಲ್ಲಿ ಪ್ರಚಾರ ಕಾರ್ಯಗಳಿಗೆ ಅನುಮತಿ ನೀಡಲು ಸಿಂಗಲ್ ವಿಂಡೋ ವ್ಯವಸ್ಥೆ ತರಲಾಗುವುದು ಎಂದವರು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧೀಕಾರಿ ಕುಮಾರ್ ಮಾಹಿತಿ ನೀಡಿದರು. ವಿವಿಧ ರಾಜಕೀಯ ಪಕ್ಷ ಮುಖಂಡರಾದ ಸದಾಶಿವ ಉಳ್ಳಾಲ್, ಧೀರಜ್ ಪಾಲ್, ಮುಹಮ್ಮದ್ ಹನೀಫ್(ಕಾಂಗ್ರೆಸ್), ರವೀಂದ್ರ ಕುಮಾರ್(ಬಿಜೆಪಿ) ಹಾಗೂ ವಸಂತ ಪೂಜಾರಿ (ಜಾತ್ಯತೀತ ಜನತಾದಳ ) ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X