ಸೇನೆಯ ಕೆಲ ಹಿರಿಯ ಅಧಿಕಾರಿ, ಸಿಬ್ಬಂದಿ ನಡೆಸುತ್ತಿದ್ದ ಅಕ್ರಮ ಬಯಲಿಗೆಳೆದಿದ್ದಕ್ಕೆ ತನ್ನನ್ನು ಸೇನೆಯಿಂದ ವಜಾಗೊಳಿಸಲಾಗಿದೆ ಎಂದು ಆರೋಪಿಸಿ, ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯ ಮಾಜಿ ಯೋಧರೋರ್ವರು ತಮ್ಮ ಕುಟುಂಬ ಸದಸ್ಯರ ಸಮೇತ ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.