Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತೊಗಾಡಿಯಾ ಬೆದರಿಕೆಯ ಸಾಕ್ಷ್ಯವನ್ನು...

ತೊಗಾಡಿಯಾ ಬೆದರಿಕೆಯ ಸಾಕ್ಷ್ಯವನ್ನು ಬಹಿರಂಗ ಪಡಿಸಲಿ: ಅಲ್ಲಾರಂಡ ವಿಠಲ್ ನಂಜಪ್ಪ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ17 Jan 2018 6:47 PM IST
share
ತೊಗಾಡಿಯಾ ಬೆದರಿಕೆಯ ಸಾಕ್ಷ್ಯವನ್ನು ಬಹಿರಂಗ ಪಡಿಸಲಿ: ಅಲ್ಲಾರಂಡ ವಿಠಲ್ ನಂಜಪ್ಪ ಆಗ್ರಹ

ಮಡಿಕೇರಿ, ಜ.17 :ವಿಶ್ವ ಹಿಂದೂ ಪರಿಷತ್ ಮುಖಂಡರಾದ ತೊಗಾಡಿಯ ಅವರು ತಮಗೆ ಜೀವ ಬೆದರಿಕೆ ಇದೆ ಎಂದು ತಿಳಿಸಿದ್ದು, ಈ ಬಗ್ಗೆ ಸಾಕ್ಷ್ಯಗಳ ಸಹಿತ ಬಹಿರಂಗ ಪಡಿಸಲಿ ಎಂದು ಪ್ರಗತಿಪರ ಚಿಂತಕರ ವೇದಿಕೆಯ ಸಂಚಾಲಕರಾದ ಅಲ್ಲಾರಂಡ ವಿಠಲ್ ನಂಜಪ್ಪ ತಿಳಿಸಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆದರಿಕೆ ಯಾರಿಂದ ಇದೆ ಎನ್ನುವುದನ್ನು ತೊಗಾಡಿಯ ಅವರು ಆದಷ್ಟು ಬೇಗ ಬಹಿರಂಗಗೊಳಿಸಿದರೆ ಚಿಂತಕರಾದ ದಾಬೊಲ್ಕರ್ ಡಾ. ಕಲಬುರ್ಗಿ ಹಾಗೂ ಗೌರಿ ಲಂಕೇಶ್ ಇವರ ಹತ್ಯೆಯ ಕಾರಣಗಳು ಮತ್ತು ಹಂತಕರು ಯಾರು ಎನ್ನುವುದು ಕೂಡ ತಿಳಿಯುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.

ಪ್ರಗತಿಪರ ಚಿಂತಕರಾದ ನಾವುಗಳು ಸಂಘ ಪರಿವಾರದ ಸಂಘಟನಾ ಸಾಮರ್ಥ್ಯವನ್ನು ಯಾವತ್ತೋ ಮೆಚ್ಚಿಕೊಂಡಿದ್ದೇವೆ. ಪರಿವಾರ ಬೆಳೆದು ಬಂದ ದಾರಿಯಲ್ಲಿ ಬದ್ಧತೆ ಮತ್ತು ವ್ಯವಸ್ಥೆಗಳು ಅಚ್ಚುಕಟ್ಟಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಪರಿವಾರದ ಕೊಂಬೆಗಳು ವಿ.ಹೆಚ್.ಪಿ. ಭಜರಂಗದಳ ಬಿಜೆಪಿ ಇತ್ಯಾದಿಗಳು ಕಾರ್ಯನಿರ್ವಹಿಸುತ್ತಿವೆಯಾದರೂ ಅವುಗಳು ಒಂದೇ ಮೆದುಳಿನಿಂದ ಕಾರ್ಯನಿರ್ವಹಿಸುತ್ತದೆ. ಇದೀಗ ಆಶ್ಚರ್ಯ ಮತ್ತು ಅಘಾತಕಾರಿ ಸುದ್ದಿ ವಿ.ಹೆಚ್.ಪಿ. ಮುಖಂಡ ತೊಗಾಡಿಯರವರು ಆಪತ್ತಿನಲ್ಲಿರುವುದು ನಮಗಳಿಗೂ ದುಃಖ ತಂದಿದೆ. ವೈಚಾರಿಕವಾಗಿ ವಿಚಾರ ಭಿನ್ನಾಭಿಪ್ರಾಯಗಳಲ್ಲಿ ನಾವು ಉತ್ತರ ದಕ್ಷಿಣದವರೇ ಹೌದು. ತೊಗಾಡಿಯ ಆಪತ್ತಿನಲ್ಲಿದ್ದಾರೆ ಎಂಬುದನ್ನು ಈ ದೇಶ ಊಹಿಸಿಕೊಳ್ಳಲೇ ಕಷ್ಟವಾಗಿದೆ ಎಂದು ವಿಠಲ್ ನಂಜಪ್ಪ ತಿಳಿಸಿದ್ದಾರೆ.

ತೊಗಾಡಿಯರ ಸಿದ್ದಾಂತಗಳನ್ನು ನಾವು ಒಪ್ಪುವುದಿಲ್ಲ. ಆದರೆ ಆ ಜೀವವನ್ನು ಅವರ ಸಂಘಟನಾ ಸಾಮರ್ಥ್ಯ ಅವರ ವಿಚಾರ ಮಂಡನೆಯ ರೀತಿಯನ್ನು ಮೆಚ್ಚುತ್ತೇವೆ. ಅಹಮದಬಾದ್‍ನಲ್ಲಿ ಪಟೇಲ್ ಮೀಸಲಾತಿ ಹೋರಾಟದ ನಾಯಕ ಹಾರ್ದಿಕ್ ಪಾಟೇಲ್ ತೊಗಾಡಿಯರವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿದ್ದಾರೆ. ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರತ್ತ ಬೊಟ್ಟು ಮಾಡಿದ್ದಾರೆ. ಮೋದಿ ಮತ್ತು ಅಮಿತ್‍ಶಾ ಯಾವೆಲ್ಲಾ ಪಿತೂರಿ ನಡೆಸುತ್ತಾರೆ ಎಂಬುದಾಗಿ ಗೊತ್ತಿದೆ ಎಂಬ ಹೇಳಿಕೆ ನೀಡಿರುವುದು ಹತ್ತು ಹಲವು ರೀತಿಯ ಯೋಚನೆಗಳಿಗೆ ದಾರಿ ಮಾಡಿ ಕೊಟ್ಟಿದೆ ಎಂದು ವಿಠಲ್ ನಂಜಪ್ಪ ಆರೋಪಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶವಗಳೊಂದಿಗೆ ಸಂಭ್ರಮಿಸಿದನ್ನು ಮತ್ತು ನಟ ಪ್ರಕಾಶ್ ರೈ ಅವರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಕಾರಣಕ್ಕಾಗಿ ಶಿರಸಿಯಲ್ಲಿನ ಮಠ ಒಂದರ ಆವರಣ ಹಾಗೂ ಕಾರ್ಯಕ್ರಮದ ವೇದಿಕೆಯನ್ನು ಗೋಮೂತ್ರದಿಂದ ಶುದ್ದೀಕರಿರುವ ಬಿಜಿಪಿ ಕಾರ್ಯಕರ್ತರ ನಡವಳಿಕೆಯನ್ನು ವೇದಿಕೆ ಖಂಡಿಸುತ್ತದೆ ಎಂದು ಅವರು ತಿಳಿಸಿದರು. ಸಾಮಾಜಿಕ ಜೀವನದಲ್ಲಿ ಶಾಂತಿ ಬಯಸುವ ನಮಗೆ ಈ ಎಲ್ಲಾ ವಿಚಾರಗಳು ಆಘಾತಕಾರಿಯಾಗಿದೆ. ಸಂಘ ಪರಿವಾರ ಉಡುಪಿ, ಮೈಸೂರು ರಂಗಾಯಣದಲ್ಲೂ ಗೋಮೂತ್ರ ಶುದ್ದೀಕರಣ ಮಾಡಿತ್ತು. ಅವರುಗಳು ದಯವಿಟ್ಟು ಗೋಮೂತ್ರವನ್ನು ಅವರ ಅಂತರಂಗಕ್ಕೆ ಸಿಂಪಡಿಸಿಕೊಂಡು ಅಂತರಂಗ ಶುದ್ದೀಕರಿಸಿಕೊಳ್ಳಲಿ ಎಂದು ವಿಠಲ್ ನಂಜಪ್ಪ ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X