ದಲಿತ ಬಾಲಕಿಯ ಅತ್ಯಾಚಾರ, ಹತ್ಯೆ ಪ್ರಕರಣ: ಪ್ರಧಾನ ಆರೋಪಿ ಶವವಾಗಿ ಪತ್ತೆ

ಕುರುಕ್ಷೇತ್ರ, ಜ. 17: ಹರ್ಯಾಣದಲ್ಲಿ 15 ವರ್ಷದ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯಾಗಿದ್ದ 12ನೇ ತರಗತಿ ವಿದ್ಯಾರ್ಥಿಯ ಶವ ಮಂಗಳವಾರ ರಾತ್ರಿ ಪತ್ತೆಯಾಗಿದೆ. ಕುರುಕ್ಷೇತ್ರ ಜಿಲ್ಲೆಯ ಕಿರ್ಮಚ್ ಗ್ರಾಮದ ಸಮೀಪ ಕಾಲುವೆಯೊಂದರಲ್ಲಿ ಬಾಲಕನ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ಮೃತದೇಹ ಆತನ ಗ್ರಾಮವಾದ ಝಾನ್ಸಾದಿಂದ 25 ಕಿ.ಮೀ. ದೂರದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆದರೆ, ದೇಹದ ಮೇಲೆ ಯಾವುದೇ ಗಾಯಗಳು ಕಂಡುಬಂದಿಲ್ಲ ಎಂದು ಕುರುಕ್ಷೇತ್ರ ಪೊಲೀಸ್ ಠಾಣೆಯ ಅಧಿಕಾರಿ ದಿಲೀಪ್ ತಿಳಿಸಿದ್ದಾರೆ. ಇಬ್ಬರನ್ನೂ ಅನಾಮಿಕ ವ್ಯಕ್ತಿಗಳು ಹತ್ಯೆ ಮಾಡಿರುವ ಸಾಧ್ಯತೆ ಇದೆ. ಮರ್ಯಾದೆ ಹತ್ಯೆಯನ್ನು ಕೂಡ ತಳ್ಳಿ ಹಾಕುವಂತಿಲ್ಲ ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ, ಇವರಿಬ್ಬರ ನಡುವೆ ಸಂಬಂಧ ಇತ್ತು ಎನ್ನುವುದನ್ನು ಬಾಲಕಿಯ ಕುಟುಂಬದವರು ನಿರಾಕರಿಸಿದ್ದಾರೆ. ಪೊಲೀಸರು ನಿಜವಾದ ಅಪರಾಧಿಗಳನ್ನು ಬಂಧಿಸಲಿ ಎಂದು ನಾವು ಬಯಸುತ್ತೇವೆ.
ಬಾಲಕಿಯ ಅತ್ಯಾಚಾರ ಹಾಗೂ ಹತ್ಯೆ ಘಟನೆಯಲ್ಲಿ ಬಾಲಕಿ ಭಾಗಿಯಾಗಿದ್ದಿದ್ದರೆ ಆತನ ಹತ್ಯೆ ಆಗುತ್ತಿರಲಿಲ್ಲ ಎಂದು ಬಾಲಕಿಯ ತಾಯಿ ಹೇಳಿದ್ದಾರೆ. ಪ್ರಕರಣ ಸಂಬಂಧಿಸಿ ವಿಚಾರಣೆ ನಡೆಸಲು ಬಾಲಕನ ಕುಟುಂಬದ ಸದಸ್ಯರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.