ಜ.18: ಹಾಜಿ ಅಬ್ದುಲ್ಲಾ ಆಸ್ಪತ್ರೆ ಲೋಕಾರ್ಪಣೆ
ಉಡುಪಿ, ಜ.17: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಲೋಕ ಸಮರ್ಪಣಾ ಸಮಾರಂಭ ಗುರುವಾರ ಬೆಳಗ್ಗೆ 10:30ಕ್ಕೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಉಡುಪಿ ಜನತೆಯ ವಿರೋಧ, ಪ್ರತಿರೋಧದ ನಡುವೆಯೇ ನಿರ್ಮಾಣ ಗೊಂಡ ಈ ಆಸ್ಪತ್ರೆಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶ್ರೀಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀ ಆಶೀರ್ವಚನ ನೀಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ರಾಜ್ಯ ಆರೋಗ್ಯ ಸಚಿವ ಕೆ.ಆರ್.ರಮೇಶ್ ಕುಮಾರ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





