Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಧಿಕಾರಿ ಬಿ.ವಿ.ವಾಸಂತಿ ಅಮರ್ ವಿರುದ್ಧ...

ಅಧಿಕಾರಿ ಬಿ.ವಿ.ವಾಸಂತಿ ಅಮರ್ ವಿರುದ್ಧ ಚಾಟಿ ಬೀಸಿದ ಹೈಕೋರ್ಟ್

ಅಕ್ರಮ ಖಾತೆ ಬದಲಾವಣೆ ಆರೋಪ

ವಾರ್ತಾಭಾರತಿವಾರ್ತಾಭಾರತಿ17 Jan 2018 9:16 PM IST
share
ಅಧಿಕಾರಿ ಬಿ.ವಿ.ವಾಸಂತಿ ಅಮರ್ ವಿರುದ್ಧ ಚಾಟಿ ಬೀಸಿದ ಹೈಕೋರ್ಟ್

ಬೆಂಗಳೂರು, ಜ.17: ಅಕ್ರಮ ಖಾತೆ ಬದಲಾವಣೆ ಆರೋಪದಲ್ಲಿ ಮಂಗಳವಾರವಷ್ಟೇ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದಿಂದ ಅಮಾನತು ಆದೇಶಕ್ಕೆ ಗುರಿಯಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹದೇವಪುರ ವಲಯದ ಜಂಟಿ ಆಯುಕ್ತೆ ಬಿ.ವಿ.ವಾಸಂತಿ ಅಮರ್ ಅವರಿಗೆ ಮತ್ತೊಂದು ಪ್ರಕರಣದಲ್ಲಿ ಹೈಕೋರ್ಟ್ ಚಾಟಿ ಬೀಸಿದೆ.

ಖಾತೆ ಬದಲಾವಣೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ರಾಜ್ಯ ಸಂಘಟನಾ ಕಾರ್ಯದರ್ಶಿ ಪಾರ್ವತಿ ರೆಡ್ಡಿ ಅರ್ಜಿಯನ್ನು ವಾಸಂತಿ ಅಮರ್ ಕಾನೂನು ಬಾಹಿರವಾಗಿ ಮಾನ್ಯ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಕಿಡಿ ಕಾರಿದೆ.

ಕುಂದಣಹಳ್ಳಿಯ ಹ್ಯಾಬಿಟ್ಯಾಟ್ ಓನರ್ಸ್ ಅಸೋಸಿಯೇಷನ್ ಅಧ್ಯಕ್ಷ ಅಜಿತ್ ಕಾರ್ನಾಡ್ ಪರ ವಾದಿಸಿದ ವಕೀಲ ಧನಂಜಯ ಜೋಷಿ ಅವರು, ಅರ್ಜಿದಾರರು ಅಪಾರ್ಟ್‌ಮೆಂಟ್ ಮಾಲಕರು. ಇವರ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯದಲ್ಲಿ ವ್ಯಾಜ್ಯ ನಡೆಯುತ್ತಿದೆ. ಈ ಪ್ರಕರಣದಲ್ಲಿ ಬಿಬಿಎಂಪಿ ಅರ್ಜಿದಾರರ ವಿರುದ್ಧ ಕ್ರಮಕ್ಕೆ ಮುಂದಾಗದಂತೆ ನ್ಯಾಯಾಲಯದ ತಡೆಯಾಜ್ಞೆಯೂ ಇದೆ ಎಂದರು.

ಪಾರ್ವತಿ ರೆಡ್ಡಿ ಅವರಿಗೆ ಈ ಪ್ರಕರಣದಲ್ಲಿ ಭಾಗಿಯಾಗಲು ಯಾವುದೇ ಅಧಿಕಾರವಿಲ್ಲ. ಆದರೂ ಜಂಟಿ ಆಯುಕ್ತರು ಪಾರ್ವತಿ ರೆಡ್ಡಿಯವರ ಅರ್ಜಿಯನ್ನು ಕಾನೂನು ಬಾಹಿರವಾಗಿ ಮಾನ್ಯ ಮಾಡಿದ್ದಾರೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿ, ಜಂಟಿ ಆಯುಕ್ತರಿಗೆ ಅಷ್ಟೂ ಕಾನೂನು ಗೊತ್ತಿಲ್ಲವೇ, ಅವರ ಹೆಸರೇನು ಎಂದು ಜೋಷಿ ಅವರನ್ನು ಪ್ರಶ್ನಿಸಿದರು. ಹೆಸರು ಗೊತ್ತಿಲ್ಲ ಎಂದು ಜೋಷಿ ಹೇಳುತ್ತಿದ್ದಂತೆಯೇ ಆದೇಶದ ಉಕ್ತಲೇಖನ ನೀಡಿದ ನ್ಯಾಯಮೂರ್ತಿಗಳು, ಇದೊಂದು ಗಂಭೀರ ಪ್ರಕರಣ. ಇದರಲ್ಲಿ ಜಂಟಿ ಆಯುಕ್ತರನ್ನೂ (ವಾಸಂತಿ) ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡಿ. ನ್ಯಾಯಾಲಯದ ಆದೇಶಗಳಿದ್ದರೂ ಒಂದೇ ಸಮನೆ ತಮ್ಮ ಅಧಿಕಾರ ಚಲಾಯಿಸಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಅವರ ವಿರುದ್ಧ ನೋಟಿಸ್ ಜಾರಿಗೆ ಆದೇಶಿಸಿದರು.

ಈ ಪ್ರಕರಣದಲ್ಲಿ ಜಂಟಿ ಆಯುಕ್ತರು ಯಾವುದೇ ಕ್ರಮಕ್ಕೆ ಮುಂದಾಗಬಾರದು ಮತ್ತು ಮುಂದಿನ ವಿಚಾರಣೆ ವೇಳೆಗೆ ಅವರು, ವೈಯಕ್ತಿಕವಾಗಿ ತಮ್ಮ ಪ್ರಮಾಣ ಪತ್ರ ಸಲ್ಲಿಸಬೇಕು ಎಂದೂ ಆದೇಶಿಸಿದರು.

ಈ ಆದೇಶದ ಪ್ರತಿಯನ್ನು ರಾಜ್ಯ ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಹಾಗೂ ಬಿಬಿಎಂಪಿ ಆಯುಕ್ತರಿಗೆ ರವಾನಿಸಿ. ಜಂಟಿ ಆಯುಕ್ತರ ನಡೆ ಕುರಿತಂತೆ ಸೂಕ್ತ ವರದಿ ತರಿಸಿಕೊಳ್ಳಿ. ಹಾಗೆಯೇ ಪಾರ್ವತಿ ರೆಡ್ಡಿ ಅವರಿಗೆ ಎಚ್ಚರಿಕೆ ರೂಪದಲ್ಲಿ ಏಕೆ ದಂಡ ವಿಧಿಸಬಾರದು ಮತ್ತು ಶಿಸ್ತು ಕ್ರಮ ಕೈಗೊಳ್ಳಬಾರದು ಎಂದೂ ನ್ಯಾಯಪೀಠ ಪ್ರಶ್ನಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X