Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಕ್ರಮ ಗಣಿಗಾರಿಕೆ ಪ್ರಕರಣ: ಎಸ್‌ಐಟಿಯಿಂದ...

ಅಕ್ರಮ ಗಣಿಗಾರಿಕೆ ಪ್ರಕರಣ: ಎಸ್‌ಐಟಿಯಿಂದ ಮರು ತನಿಖೆಗೆ ಸಚಿವ ಸಂಪುಟ ತೀರ್ಮಾನ

ವಾರ್ತಾಭಾರತಿವಾರ್ತಾಭಾರತಿ17 Jan 2018 10:04 PM IST
share

ಬೆಂಗಳೂರು, ಜ.17: ರಾಜ್ಯದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ಸಾಕ್ಷಾಧ್ಯಾರಗಳ ಕೊರತೆ ಹಿನ್ನೆಲೆಯಲ್ಲಿ ಪ್ರಾಥಮಿಕ ಹಂತದಲ್ಲೆ ಕೈ ಬಿಟ್ಟಿದ ಪ್ರಕರಣಗಳನ್ನು ರಾಜ್ಯದ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಮೂಲಕ ಮರು ತನಿಖೆ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಂಡಿರುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗೋವಾ ರಾಜ್ಯದ ಮರ್ಮ ಗೋವಾ ಹಾಗೂ ಪಣಜಿ ಬಂದರು ಮೂಲಕ ಕಬ್ಬಿಣದ ಅದಿರು ಸಾಗಣೆಯಾಗಿರುವ ಕುರಿತಂತೆ ಮೇಲ್ನೋಟಕ್ಕೆ ಯಾವುದೇ ದಾಖಲೆಗಳು ಕಂಡು ಬರುತ್ತಿಲ್ಲವೆಂದು ಸಿಬಿಐ ಕೈ ಬಿಟ್ಟಿರುವ ತನಿಖೆಯನ್ನು ರಾಜ್ಯದ ಎಸ್‌ಐಟಿ ಮೂಲಕ ನಡೆಸಲು ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಅವರು ಹೇಳಿದರು.

ಗೋವಾ ರಾಜ್ಯದ ಈ ಎರಡೂ ಪ್ರದೇಶಗಳೂ ಹಾಗೂ ರಾಜ್ಯದ ನವ ಮಂಗಳೂರು ಮತ್ತು ಕಾರವಾರದ ಬೇಲಿಕೇರಿ ಬಂದರು ಮೂಲಕ ಅವ್ಯಾಹತವಾಗಿ ನಡೆದಿದೆ ಎನ್ನಲಾದ ಕಬ್ಬಿಣದ ಅದಿರು ಅಕ್ರಮ ರಫ್ತು ಪ್ರಕರಣವನ್ನು ರಾಜ್ಯದ ವಿಶೇಷ ತನಿಖಾ ತಂಡ(ಎಸ್‌ಐಟಿ)ಕ್ಕೆ ವಹಿಸಿ ತನಿಖೆ ನಡೆಸುವಂತೆ ಸೂಚಿಸಲು ತೀರ್ಮಾನಿಸಿದೆ ಎಂದು ಅವರು ತಿಳಿಸಿದರು.

ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಹಾಗೂ ಕಬ್ಬಿಣದ ಅದಿರು ಸಾಗಣೆ ಕುರಿತಂತೆ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಸಲ್ಲಿಸಿದ ಎರಡು ವರದಿಗಳನ್ನು ಆಧರಿಸಿ, ಕರ್ನಾಟಕ, ಗೋವಾ, ಆಂಧ್ರಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳ ವಿವಿಧ ಬಂದರುಗಳ ಮೂಲಕ ರಾಜ್ಯದ 50 ಸಾವಿರಕ್ಕೂ ಹೆಚ್ಚು ಮೆಟ್ರಿಕ್ ಟನ್ ಕಬ್ಬಿಣದ ಅದಿರು ಲೂಟಿಯಾಗಿದೆ ಎಂಬ ಆರೋಪ ಕುರಿತಂತೆ ತನಿಖೆ ನಡೆಸಲು ಲೋಕಾಯುಕ್ತ ವರದಿಯಲ್ಲಿನ ದಾಖಲೆಗಳನ್ನು ಆಧರಿಸಿ ಸುಪ್ರೀಂಕೋರ್ಟ್ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು ಎಂದು ಅವರು ಹೇಳಿದರು.

ಲೋಕಾಯುಕ್ತ ವರದಿಯಲ್ಲಿಯೇ ದಾಖಲೆಗಳು ನಮೂದಾಗಿದ್ದರೂ, ಗೋವಾ ರಾಜ್ಯದ ಬಂದರುಗಳಲ್ಲಿ ತನಿಖೆ ನಡೆಸಿದ ಸಿಬಿಐ ಮೇಲ್ನೋಟಕ್ಕೆ ದಾಖಲೆಗಳಿಲ್ಲ ಎಂದು ಹೇಳಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲು ರಾಜ್ಯದ ಎಸ್‌ಐಟಿಗೆ ವಹಿಸಲು ಸಂಪುಟ ನಿರ್ಧರಿಸಿದೆ ಎಂದು ಜಯಚಂದ್ರ ತಿಳಿಸಿದರು.

ಇದು ಅಂತಾರಾಜ್ಯ ಪ್ರಕರಣ. ಗೋವಾ ಬಂದರುಗಳಿಗೆ ತೆರಳಿ ತನಿಖೆ ನಡೆಸಲು ರಾಜ್ಯದ ವಿಶೇಷ ತನಿಖಾ ತಂಡಕ್ಕೆ ವ್ಯಾಪ್ತಿ ಇದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಅದಿರು, ನಮಗೆ ನಷ್ಟ ಉಂಟಾಗಿದೆ ಎಂದರು.

ಆಂಧ್ರಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳ ಬಂದರುಗಳಲ್ಲಿ ನಡೆದಿದೆ ಎನ್ನಲಾದ ಅದಿರು ರಫ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರದಿಂದ ಸೂಕ್ತ ತೀರುವಳಿಗಳು ಈವರೆಗೂ ಬಾರದ ಹಿನ್ನೆಲೆಯಲ್ಲಿ ಈ ಬಗ್ಗೆ ಸಿಬಿಐ ಇನ್ನೂ ತನಿಖೆ ಪ್ರಾರಂಭಿಸಿಲ್ಲ ಹಾಗೂ ಪೂರ್ಣಗೊಳಿಸಿಲ್ಲ. ಆದುದರಿಂದ, ಗೋವಾ ಮತ್ತು ಕರ್ನಾಟಕದ ಬಂದರುಗಳಿಗೆ ಸೀಮಿತವಾಗಿ ತನಿಖೆ ನಡೆಸಲು ಎಸ್‌ಐಟಿಗೆ ಸೂಚಿಸಲು ಸಂಪುಟ ಸಮ್ಮತಿಸಿದೆ ಎಂದು ಜಯಚಂದ್ರ ಹೇಳಿದರು.

ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬಿರುಗಾಳಿ ಎಬ್ಬಿಸಿದ್ದ ಅಕ್ರಮ ಅದಿರು ಸಾಗಾಣಿಕೆ ಪ್ರಕರಣ ಇದೀಗ ಚುನಾವಣೆ ಹೊಸ್ತಿಲಿನಲ್ಲಿ ಮತ್ತೆ ರಾಜ್ಯ ರಾಜಕೀಯದಲ್ಲಿ ಧೂಳೆಬ್ಬಿಸುವ ಲಕ್ಷಣಗಳು ಗೋಚರಿಸುತ್ತಿವೆ. ಸಚಿವ ಎಚ್.ಕೆ.ಪಾಟೀಲ್ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಚಿವ ಸಂಪುಟ ಉಪ ಸಮಿತಿ ನೀಡಿದ್ದ ವರದಿಯನ್ನಾಧರಿಸಿ ಎಸ್‌ಐಟಿ ತನಿಖೆ ನಡೆಸಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಕಾರವಾರದ ಬೆಲಿಕೆರಿ ಬಂದರಿನಿಂದ 79.36 ಲಕ್ಷ ಮೆಟ್ರಿಕ್ ಟನ್ ಅದಿರು ಅಕ್ರಮವಾಗಿ ಸಾಗಾಣೆ ಮಾಡಲಾಗಿದೆ. ನವ ಮಂಗಳೂರು ಬಂದರಿನಿಂದ 2.85 ಕೋಟಿ ಮೆಟ್ರಿಕ್ ಟ್ರನ್ ಅದಿರು ಅಕ್ರಮವಾಗಿ ಸಾಗಾಣೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ರಾಜ್ಯದಲ್ಲಿ 2009 ರಿಂದ ಮಾರ್ಚ್ 2010 ರವರೆಗೆ ವಿವಿಧ ಬಂದರುಗಳ ಮೂಲಕ ರಾಜ್ಯದಿಂದ ಲಕ್ಷಾಂತರ ಟನ್ ಕಬ್ಬಿಣದ ಅದಿರು ಅಕ್ರಮವಾಗಿ ವಿದೇಶಗಳಿಗೆ ಸಾಗಾಣೆ ಮಾಡಲಾಗಿದೆ ಎಂದು ಲೋಕಾಯುಕ್ತ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಸಿಬಿಐ ಮಾಜಿ ಸಚಿವ ಜನಾರ್ದನ ರೆಡ್ಡಿ, ಶಾಸಕರಾದ ಆನಂದಸಿಂಗ್, ನಾಗೇಂದ್ರ ಬಾಬು, ಸುರೇಶ್ ಬಾಬು, ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಸೇರಿದಂತೆ 26 ಮಂದಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದರು. ಅಲ್ಲದೆ, ಅದಾನಿ ಕಂಪನಿ ವಿರುದ್ದವೂ ಅಕ್ರಮ ಅದಿರು ಸಾಗಾಣೆ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X