ಗಂಗೊಳ್ಳಿ: ಮೀನುಗಾರ ನಾಪತ್ತೆ
ಗಂಗೊಳ್ಳಿ, ಜ.17: ಗುಜ್ಜಾಡಿ ಗ್ರಾಮದ ಬೆಣ್ಗೇರಿ ನಿವಾಸಿ ಚಂದ್ರಹಾಸ ಖಾರ್ವಿ ಎಂಬವರು ನಾಪತ್ತೆಯಾಗಿರುವ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಪೆಮತ್ತು ಮಂಗಳೂರಿನಲ್ಲಿ ಬೋಟ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಇವರು ಮಲ್ಪೆಗೆ ಹೋಗಿ ಬಾಕಿ ಇರುವ ಹಣ ಪಡೆದು ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೋದವರು ಈವರೆಗೆ ಮನೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಇವರ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
Next Story





