Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಚುನಾವಣಾ ಆಯೋಗದ ನಿರ್ದೇಶನ...

ಮಡಿಕೇರಿ: ಚುನಾವಣಾ ಆಯೋಗದ ನಿರ್ದೇಶನ ಪಾಲಿಸಿ; ಜಿಲ್ಲಾಧಿಕಾರಿ ಶ್ರೀ ವಿದ್ಯಾ

ವಿಧಾನಸಭೆ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ17 Jan 2018 10:47 PM IST
share
ಮಡಿಕೇರಿ: ಚುನಾವಣಾ ಆಯೋಗದ ನಿರ್ದೇಶನ ಪಾಲಿಸಿ; ಜಿಲ್ಲಾಧಿಕಾರಿ ಶ್ರೀ ವಿದ್ಯಾ

ಮಡಿಕೇರಿ, ಜ.17: ಚುನಾವಣಾ ಆಯೋಗದ ನಿರ್ದೇಶನವನ್ನು ಎಲ್ಲ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಪಾಲಿಸಬೇಕು. ಯಾವುದೇ ರೀತಿಯ ಲೋಪಗಳು ಕಂಡು ಬರದಂತೆ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ತಹಶೀಲ್ದಾರ್‌ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ವಿಧಾನಸಭೆ ಚುನಾವಣೆಯ ನಿಮಿತ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧಿಸಿದಂತೆ ಜ.22ರವರೆಗೆ ಅವಕಾಶವಿದ್ದು, ಈ ಸಂಬಂಧ ಜಾಗೃತಿ ಮೂಡಿಸಬೇಕಾಗಿದೆ ಎಂದು ಸಲಹೆ ನೀಡಿದರು.

ತಾಲೂಕು ಮಟ್ಟದಲ್ಲಿ ತಹಶೀಲ್ದಾರ್‌ರು, ಬೂತ್‌ಮಟ್ಟದ ಅಧಿಕಾರಿಗಳು ಮತ್ತು ಮೇಲ್ವಿಚಾರಕರು ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾಹಿತಿ ನೀಡಬೇಕು. ನಮೂನೆ 6,7, 8 ಮತ್ತು 8ಎ ಯನ್ನು ಪರಿಷ್ಕರಣೆ ಮಾಡಬೇಕು. ಹಾಗೆಯೇ ಇಆರ್‌ಎಂಎಸ್‌ನಲ್ಲಿ ದಾಖಲೆ ನಮೂದಿಸಿ ಇತ್ಯರ್ಥ ಮಾಡಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಇದ್ದು, ಭಾವಚಿತ್ರವಿಲ್ಲದೆ ಇರುವ ಮತದಾದರರಿಂದ ಭಾವಚಿತ್ರ ಪಡೆದು ಡಾಟಾ ಎಂಟ್ರಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಮತಗಟ್ಟೆ ಕೇಂದ್ರಗಳಲ್ಲಿ ರ್ಯಾಂಪ್ ವ್ಯವಸ್ಥೆ, ವಿದ್ಯುತ್ ಸಂಪರ್ಕ, ಶೌಚಾಲಯ, ಕುಡಿಯುವ ನೀರು, ಪೀಠೋಪಕರಣ ಶೇಲ್ಟರ್ ಮತ್ತಿತರ ಅಗತ್ಯ ಮೂಲ ಸೌಲಭ್ಯಗಳು ಇವೆಯೇ ಎಂಬುದನ್ನು ಪರಿಶೀಲಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಗ್ರಾಮೀಣ ಮತ್ತು ನಗರದ ಪ್ರದೇಶದ ಮತಗಟ್ಟೆ ಗುರುತಿಸುವುದು, ಪರ್ಯಾಯ ಮತಗಟ್ಟೆ ಗುರುತಿಸುವುದು, ಮತಗಟ್ಟೆ ಪುನರ್ ವಿಂಗಡಣೆ, ನಂತರ ಹೊಸದಾಗಿ ಸ್ಥಾಪಿಸಿರುವ ಮತಗಟ್ಟೆಗಳ ಬಗ್ಗೆ ಮತದಾರರಿಗೆ ಮಾಹಿತಿ ನೀಡುವುದು, ಮತಗಟ್ಟೆ ಬದಲಾವಣೆ ಇದ್ದಲ್ಲಿ ಪ್ರಸ್ತಾವ ಸಲ್ಲಿಸು ವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ವಿದ್ಯುನ್ಮಾನ ಮತಯಂತ್ರ ಮತ್ತು ವಿವಿಪ್ಯಾಟ್ ದಾಸ್ತಾನು ಮಾಡಲು ಸ್ಥಳ ಗುರುತಿಸುವುದು ಹಾಗೂ ಇವಿಎಂ ಮತ್ತು ವಿವಿಪ್ಯಾಟ್ ಕಾರ್ಯನಿರ್ವಹಣೆ ಬಗ್ಗೆ ರಾಜಕೀಯ ಪಕ್ಷದ ಮುಖಂಡರಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ಜಿಪಂ ಸಿಇಒ ಪ್ರಶಾಂತ್‌ಕುಮಾರ್ ಮಿಶ್ರ ಮಾತನಾಡಿ, ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವದಡಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕಿದೆ. ಈಗಾಗಲೇ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ ಮಾತನಾಡಿ, ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಚುನಾವಣಾ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದ್ದು, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಚುನಾವಣಾ ಅಧಿಕಾರಿಗಳು ಮತ್ತು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡಬೇಕಿದೆ ಎಂದು ಅವರು ಮಾಹಿತಿ ನೀಡಿದರು.

ಉಪಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಮಾತನಾಡಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸುವುದು, ಚುನಾವಣೆ ಹಿನ್ನೆಲೆ ಅಗತ್ಯ ಬಂದೋಬಸ್ತ್ ಮಾಡುವುದು ಮತ್ತಿತರ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಜಗನಾಥ್ ಹಲವು ಮಾಹಿತಿ ನೀಡಿದರು. ತಹಶೀಲ್ದಾರ್ ಕುಸುಮಾ ಮಹೇಶ್, ಗೋವಿಂದರಾಜು, ಪ್ರವೀಣ್‌ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಭಾಗ್ಯಾ, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ್, ಶಿರಸ್ತೇದಾರರಾದ ಪ್ರಕಾಶ್, ಅನಿಲ್ ಕುಮಾರ್ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X