Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ. 20: ನಿಶ್ಚಿತ ಪಿಂಚಣಿ ಯೋಜನೆಯನ್ನು...

ಜ. 20: ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ 'ಫ್ರೀಡಂ ಪಾರ್ಕ್ ಚಲೋ'

ವಾರ್ತಾಭಾರತಿವಾರ್ತಾಭಾರತಿ17 Jan 2018 10:57 PM IST
share
ಜ. 20: ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಫ್ರೀಡಂ ಪಾರ್ಕ್ ಚಲೋ

ಬಂಟ್ವಾಳ, ಜ. 17: ಅವೈಜ್ಞಾನಿಕ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್)ಯನ್ನು ರದ್ದುಗೊಳಿಸಿ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಜ. 20ರಂದು ಬೆಳಗ್ಗೆ 10ಕ್ಕೆ ಬೆಂಗಳೂರಿನಲ್ಲಿ "ಫ್ರೀಡಂ ಪಾರ್ಕ್ ಚಲೋ" ಒಂದು ದಿನದ ಉಪವಾಸ ಧರಣಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ಎನ್‌ಪಿಎಸ್ ನೌಕರರ ಸಂಘದ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಸಂತೋಷ್ ಕುಮಾರ್ ತುಂಬೆ ಹೇಳಿದ್ದಾರೆ.

ಬುಧವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಧರಣಿಗೆ ಬಂಟ್ವಾಳ ತಾಲೂಕಿನಿಂದ 160 ಮಂದಿ ಹಾಗೂ ಜಿಲ್ಲೆಯಿಂದ ಸುಮಾರು 600 ಮಂದಿ ಸರಕಾರಿ ನೌಕರರು ಭಾಗವಹಿಸುವರು. ಅಲ್ಲದೆ ಈ ಹೋರಾಟಕ್ಕೆ ಸರಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಬಂಟ್ವಾಳ ತಾಲೂಕು ಘಟಕಗಳು ಕೂಡಾ ಬೆಂಬಲವನ್ನು ಘೋಷಿಸಿದೆ ಎಂದು ಹೇಳಿದರು.

ಎನ್‌ಸಿಪಿ ಸರಕಾರಿ ನೌಕರರ ವೇತನದಲ್ಲಿ ಶೇ.10ರಷ್ಟು ಕಡಿತಗೊಳಿಸಿ ಖಾಸಗಿ ಶೇರು ಮಾರುಕಟ್ಟೆಯಲ್ಲಿ ಹೂಡಲಾಗುತ್ತಿದೆ. ಇದರಿಂದಾಗಿ ನೌಕರರಲ್ಲಿ ಅಭದ್ರತೆ ಹಾಗೂ ಅನಿಶ್ಚಿತತೆ ಉಂಟಾಗಿದೆ. ಇದರಿಂದ ರಾಜ್ಯದಲ್ಲಿ 1.80 ಲಕ್ಷ ಸರಕಾರಿ ನೌಕರರು ಸೇವಾ ನಿವೃತ್ತಿಯ ಸಂದರ್ಭ ಪಿಂಚಣಿ ಮತ್ತು ಇತರ ಸವಲತ್ತುಗಳಿಂದ ವಂಚಿತರಾಗಿ ಸಾಮಾನ್ಯ ಅನ್ಯಾಯಕ್ಕೆ ತುತ್ತಾಗಲಿದ್ದಾರೆ ಎಂದರು.

ಅವೈಜ್ಞಾನಿಕ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್)ಯನ್ನು ರದ್ದುಗೊಳಿಸಿ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಪೂರ್ವಭಾವಿಯಾಗಿ ಜ. 18ರಂದು ಜಿಲ್ಲೆಯ ಎಲ್ಲ ತಾಲೂಕು ಕಚೇರಿ ಮುಂಭಾಗದಲ್ಲಿ ಸರಕಾರಿ ನೌಕರರು ಪ್ರತಿಭಟನೆಯನ್ನು ನಡೆಸುವ ಮೂಲಕ ಸರಕಾರಕ್ಕೆ ಮನವಿಯನ್ನು ಸಲ್ಲಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವ ಸಲಹೆಗಾರರಾದ ಉಮಾನಾಥ ರೈ ಮೇರಾವು, ಶಿವಪ್ರಸಾದ್ ಶೆಟ್ಟಿ, ರಮೇಶ್ ನಾಯಕ್ ರಾಯಿ, ಜಯರಾಮ್, ಜೋಯಲ್ ಲೋಬೊ, ಕಾರ್ಯದರ್ಶಿ ಗುರುಮೂರ್ತಿ ಬಿ. ಹಾಗೂ ಪದಾಧಿಕಾರಿಗಳಾದ ಅವಿನಾಶ್, ಬಸಯ್ಯ ಆಲಮಟ್ಟಿ, ಬಸವರಾಜ್, ನವೀನ್ ಪಿ.ಎಸ್. ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X