ಪ್ರತ್ಯೇಕ ಜೂಜಾಟ ಪ್ರಕರಣ : ಮಹಿಳೆ ಸೇರಿದಂತೆ ಏಳು ಜನರ ಬಂಧನ

ಶಿವಮೊಗ್ಗ, ಜ. 18: ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇರೆಗೆ ಪೊಲೀಸರು ಮಹಿಳೆ ಸೇರಿದಂತೆ ಎಂಟು ಜನರನ್ನು ಬಂಧಿಸಿದ ಘಟನೆ ವರದಿಯಾಗಿದೆ.
ಹಳಿಯೂರು ಸರ್ಕಲ್ ಬಳಿಯ ದುರ್ಗಮ್ಮನ ಕೇರಿಯ ಮುಖ್ಯ ದ್ವಾರದಲ್ಲಿ ಓ.ಸಿ. ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇರೆಗೆ ಪೊಲೀಸರು ಮಹಿಳೆಯೋರ್ವರನ್ನು ಬಂಧಿಸಿದ್ದಾರೆ. ಬಂಧಿತ ಆಪಾದಿತೆಯಿಂದ 850 ನಗದು, ಓ.ಸಿ. ನಂಬರ್ ಬರೆದಿದ್ದ ಬಿಳಿ ಹಾಳೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮತ್ತೊಂದು ಘಟನೆಯಲ್ಲಿ ಭದ್ರಾಪುರದಲ್ಲಿರುವ ಸರ್ಕಾರಿ ಶಾಲೆಯ ಬಳಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ, ಆರು ಜನರನ್ನು ಬಂಧಿಸಿದ್ದಾರೆ. ಈ ಎರಡು ಪ್ರಕರಣಗಳ ಕುರಿತಂತೆ ಶಿಕಾರಿಪುರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರುಗಳು ದಾಖಲಾಗಿವೆ.
Next Story





