Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಮ್‌ ಆದ್ಮಿ ಪಕ್ಷದಿಂದ ವಿಧಾನಸಭಾ...

ಆಮ್‌ ಆದ್ಮಿ ಪಕ್ಷದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ: ಪಂಕಜ್‌ ಗುಪ್ತಾ

ವಾರ್ತಾಭಾರತಿವಾರ್ತಾಭಾರತಿ18 Jan 2018 8:08 PM IST
share
ಆಮ್‌ ಆದ್ಮಿ ಪಕ್ಷದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ: ಪಂಕಜ್‌ ಗುಪ್ತಾ

ಬೆಂಗಳೂರು, ಜ.18: ಮುಂದಿನ ದಿನಗಳಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತಿದೆ ಎಂದು ಎಎಪಿ ರಾಷ್ಟ್ರೀಯ ಕಾರ್ಯದರ್ಶಿ ಪಂಕಜ್‌ಗುಪ್ತಾ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಾದ್ಯಂತ ಕೇಂದ್ರದ ಸಮಿತಿ ವತಿಯಿಂದ ಸರ್ವೆ ಮಾಡಲಾಗಿದ್ದು, ಅದರ ಪ್ರಕಾರ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಬಗ್ಗೆ ಜನ ಬೇಸತ್ತಿದ್ದು, ಪರ್ಯಾಯ ಪಕ್ಷಕ್ಕಾಗಿ ಕಾಯುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ. ಅಲ್ಲದೆ, ಶೇ.80 ರಷ್ಟು ಜನರು ಪರ್ಯಾಯ ಬೇಕು ಎಂದು ಅಭಿಪ್ರಾಯಿಸಿದ್ದಾರೆ ಎಂದು ಹೇಳಿದರು.

ಕರ್ನಾಟಕದ ಜನತೆ ಎಲ್ಲ ರಾಜಕೀಯ ಪಕ್ಷಗಳನ್ನು ಪರಾಮರ್ಶಿಸಿ ನೋಡಿದ್ದಾರೆ. ಮೂರು ಪಕ್ಷಗಳಿಗೆ ಯಾವುದೇ ವ್ಯತ್ಯಾಸವಿಲ್ಲ. ಅವರು ಜನರ ಸೇವೆಗಾಗಿ ಬಂದವರಲ್ಲ, ಜನರ ಮೇಲೆ ಆಡಳಿತ ಮಾಡಲು ಬಂದವರು. ಅವರು ಜನರ ಸಮಸ್ಯೆಗಳಿಗೆ ಪರಿಹಾರ ಹುಡುಕಲು ಬಂದವರಲ್ಲ, ಹಣ ಮಾಡಿಕೊಳ್ಳಲು ಬಂದವರು ಎಂಬ ಅಂಶವನ್ನು ಮನಗಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಜನ ಸಾಮಾನ್ಯರ ಪಕ್ಷವಾದ ಆಮ್ ಆದ್ಮಿ ಮುಂದಿನ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಾಗುತ್ತಿದೆ ಎಂದು ತಿಳಿಸಿದರು.

ಎಎಪಿ ರಾಜ್ಯ ಸಂಚಾಲಕ ಪೃಥ್ವಿರೆಡ್ಡಿ ಮಾತನಾಡಿ, ರಾಜ್ಯದ ರಾಜಧಾನಿ ನೀರು ಸರಬರಾಜು, ಕಸ ನಿರ್ವಹಣೆ, ಸಾರಿಗೆ, ವಸತಿ ಸೇರಿದಂತೆ ಎಲ್ಲ ವಿಷಯಗಳಲ್ಲಿ ಸ್ಪಂದಿಸುತ್ತಿಲ್ಲ. ರಾಜ್ಯ ಸರಕಾರ ಮತ್ತು ಬಿಬಿಎಂಪಿ ಜನರ ಯಾವುದೇ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ರಾಜ್ಯದ ಆರ್ಥಿಕ ಪ್ರಗತಿಯ ಎಂಜಿನ್ ಎನಿಸಿಕೊಂಡ ಮುಖ್ಯ ನಗರವನ್ನು ಎಲ್ಲಾ ಸರಕಾರಗಳು ನಿರ್ಲಕ್ಷಿಸಿವೆ. ರಸ್ತೆಗಳು ಹೊಂಡಗಳಾಗಿವೆ, ಕೆರೆಗಳು ಬೆಂಕಿ ಉಗುಳುತ್ತಿವೆ, ಎಲ್ಲೆಂದರಲ್ಲಿ ಕಸದ ರಾಶಿ, ಮಕ್ಕಳು ತೆರೆದ ಚರಂಡಿಗೆ ಬಿದ್ದು ಸಾಯುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದೆಲ್ಲೆಡೆ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆತ್ಮಹತ್ಯೆಯ ವಿಷಯದಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿದೆ. ಮತ್ತೊಂದು ಕಡೆ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಬದಲಿಗೆ ಬೀಗ ಹಾಕಿ ಶಿಕ್ಷಣದ ಖಾಸಗೀಕರಣ ಮಾಡುತ್ತಿದ್ದಾರೆ. ಆರ್ಥಿಕ ಪ್ರಗತಿಯಾಗುತ್ತಿದ್ದರೂ ಉದ್ಯೋಗಾವಕಾಶ ಸಂಖ್ಯೆ ಕಡಿಮೆಯಾಗುತ್ತಿದೆ. ತಮ್ಮ ಹಳ್ಳಿಗಳಲ್ಲಿ ಕೆಲಸ ಪಡೆಯಲಾಗದೇ ಜನರು ಹತಾಶರಾಗಿ ಬೆಂಗಳೂರು ಮತ್ತು ಇತರ ನಗರದೆಡೆಗೆ ವಲಸೆ ಹೋಗುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷಗಳು ಜನರನ್ನು ಒಗ್ಗೂಡಿಸುವ ಬದಲಿಗೆ ಕೋಮು ವಿಷಬೀಜವನ್ನು ಬಿತ್ತುತ್ತಿದ್ದಾರೆ. ಈ ಮೂಲಕ ಜನರ ನಡುವೆ ಒಡಕು ಮೂಡಿಸಿ, ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದಾರೆ. ಸರಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ದೂರಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಹ ಸಂಚಾಲಕರಾದ ವಿಜಯ್ ಶರ್ಮಾ, ಮೋಹನ್ ದಾಸರಿ, ಶಿವಕುಮಾರ ಚೆಂಗಲರಾಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X