Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತನ್ನ ಉಳಿವಿಗಾಗಿ ಕಾಂಗ್ರೆಸ್‌ನಿಂದ...

ತನ್ನ ಉಳಿವಿಗಾಗಿ ಕಾಂಗ್ರೆಸ್‌ನಿಂದ ಅಂಬೇಡ್ಕರ್ ಹೆಸರು ಬಳಕೆ: ಅನಂತ್‌ಕುಮಾರ್ ಹೆಗಡೆ

ಕಾಪುವಿನಲ್ಲಿ ಸಾಮಾಜಿಕ ಜಾಲತಾಣದ ಕ್ಯಾಂಪೇನ್ ಲಾಂಚ್

ವಾರ್ತಾಭಾರತಿವಾರ್ತಾಭಾರತಿ18 Jan 2018 9:31 PM IST
share
ತನ್ನ ಉಳಿವಿಗಾಗಿ ಕಾಂಗ್ರೆಸ್‌ನಿಂದ ಅಂಬೇಡ್ಕರ್ ಹೆಸರು ಬಳಕೆ:  ಅನಂತ್‌ಕುಮಾರ್ ಹೆಗಡೆ

ಕಾಪು, ಜ. 18: ಅಂಬೇಡ್ಕರ್ ಅವರಿಗೆ ಚಿತ್ರಹಿಂಸೆ ಕೊಟ್ಟು ರಾಜಕೀಯವಾಗಿ ನಿರ್ನಾಮ ಮಾಡಲು ಪ್ರಯತ್ನಿಸಿದ ಕಾಂಗ್ರೆಸ್ ತನ್ನ ಉಳಿವಿಗೋಸ್ಕರ ಮುಖವಾಡ ಬದಲಿಸಿಕೊಂಡು ಕೊಂಡು ಅದೇ ಅಂಬೇಡ್ಕರ್ ಹೆಸರನ್ನು ಹೇಳಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಅನಂತ್‌ ಕುಮಾರ್ ಹೆಗಡೆ ಹೇಳಿದರು.

ಕಾಪುವಿನ ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ಗುರುವಾರ ಕಾಪು ಬಿಜೆಪಿ ಸಾಮಾಜಿಕ ಜಾಲತಾಣದ ಕ್ಯಾಂಪೇನ್ ಲಾಂಚ್ ಕಾರ್ಯಕ್ರಮದವನ್ನು ಉದ್ಘಾಟಿಸಿ ಮಾತನಾಡಿದರು.

ಚುನಾವಣೆಗೆ ನಿಂತರೂ ಅವರನ್ನು ಸೋಲಿಸಿತು. ಈಗ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಅಂಬೇಡ್ಕರ್ ಹೆಸರು ಹೇಳಿಕೊಳ್ಳುತ್ತಿದೆ. ಜನರಿಗೆ ಹಳೆಯ ವರ್ತನೆಯ ನಾಟಕ ಪ್ರದರ್ಶನ ಮಾಡುತ್ತಿದೆ. ದೀನ ದಲಿತರು, ಹಿಂದುಳಿದವರು, ಬಡವರ ಪರ ಎಂದು ಹೇಳಿಕೊಳ್ಳುತ್ತಿದೆ. ಇತಿಹಾಸದಲ್ಲಿ ಹುದುಗಿ ಹೋಗಿರುವ ಸತ್ಯವನ್ನು ಬಿಚ್ಚಿಡಲಿಕ್ಕೆ ಹೋದರೆ ಈ ದೇಶದಲ್ಲಿ ಕಾಂಗ್ರೆಸ್ ಒಂದೇ ಒಂದು ಓಟು ಪಡೆಯಲು ಸಾಧ್ಯವಿಲ್ಲ. ರಾಜಕಾರಣ ಹೆಸರಲ್ಲಿ ಎಷ್ಟು ಅನ್ಯಾಯ ಮಾಡಬೇಕೋ ಅದನ್ನು ಕಾಂಗ್ರೆಸ್ ಮಾಡಿದೆ ಎಂದರು.

ಸ್ವಾತಂತ್ರ್ಯದ ಬಳಿಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ತನ್ನನ್ನು ಹಾಳು ಮಾಡುವುದರ ಜೊತೆಗೆ ದೇಶ ಹಾಳು ಮಾಡುತ್ತೆ ಎಂಬುದನ್ನು ಮೊದಲೇ ಅರಿತಿದ್ದ ಗಾಂಧೀಜಿ, ಕಾಂಗ್ರೆಸ್ ವಿಸರ್ಜನೆ ಮಾಡಲು ಹೇಳಿದ್ದರು. ನೆಹರು ಸಂತಾನ ಹೇಗೆ ನಡೆದುಕೊಳ್ಳುತ್ತೆ ಎಂಬುದು ಗಾಂಧೀಜಿ ಮನಗಂಡಿದ್ದರು. ಇಂದಿನ ಅವಾಂತರಗಳನ್ನು ನೋಡುತ್ತಿದ್ದೇವೆ. ಹಿಂದೂ ಸಮಾಜದ ಸಂಘಟನೆಯೇ ನಮ್ಮ ಪರಮ ಧ್ಯೇಯ, ಕೇವಲ ರಾಜಕಾರಣ ಮಾಡುವುದೇ ನಮ್ಮ ಗರಿಯಲ್ಲ. ಸಮಾಜವನ್ನು ಒಟ್ಟಾಗಿ ಕಟ್ಟಬೇಕೆನ್ನುವುದೇ ನಮ್ಮ ಧ್ಯೇಯ. ಚುನಾವಣೆ ಎಂದರೆ ದುಡ್ಡು ಮತ್ತು ಜಾತಿ ಎಂಬುದನ್ನು ಅರಿತಿದ್ದೇವೆ. ಅಭ್ಯರ್ಥಿಗಳೂ ಅದನ್ನು ತಿಳಿದಿದ್ದಾರೆ. ನಮ್ಮಲ್ಲಿನ ಉಡಾಫೆಯನ್ನು ಬದಿಗಿಟ್ಟು ಎಲ್ಲರೂ ಒಟ್ಟಾಗಿ ಕೆಲಸ ಮಾಡಿದಲ್ಲಿ ಗೆಲುವು ಸಾಧ್ಯ. ಒಡೆದು ಚೂರು ಚೂರಾಗಿ ಹೋಗುವ ಸಮಾಜ ದಲ್ಲಿ ಶಕ್ತಿ ತರಬೇಕಾದರೆ ಜಾತಿ ಮತ್ತು ದುಡ್ಡಿನ ರಾಜಕಾರಣದಿಂದ ಹೊರಬರಬೇಕು ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮುಖಂಡರಾದ ಲಾಲಾಜಿ ಆರ್ ಮೆಂಡನ್, ಗುರ್ಮೆ ಸುರೇಶ್ ಶೆಟ್ಟಿ, ಶ್ಯಾಮಲಾ ಎಸ್ ಕುಂದರ್, ಸತ್ಯಜಿತ್ ಸುರತ್ಕಲ್, ಕುತ್ಯಾರು ನವೀನ್ ಶೆಟ್ಟಿ, ಯಶಪಾಲ್ ಸುವರ್ಣ, ಜಿಪಂ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸದಸ್ಯೆ ಗೀತಾಂಜಲಿ ಸುವರ್ಣ ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮುರಲೀಧರ ಪೈ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X