ಪಾಕ್ ನ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಬಲಿ

ಶ್ರೀನಗರ, ಜ.19:ಜಮ್ಮು ಮತ್ತು ಕಾಶ್ಮೀರದ ಆರ್ ಎಸ್ ಪುರ ಸೆಕ್ಟರ್ ನಲ್ಲಿ ಪಾಕಿಸ್ತಾನದ ಸೈನಿಕರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತದ ಇಬ್ಬರು ನಾಗರಿಕರು ಬಲಿಯಾಗಿದ್ದಾರೆ.
ಇಂದು ಬೆಳಗ್ಗೆ ಪಾಕಿಸ್ತಾನ ಸೇನೆಯು ಶೆಲ್ ದಾಳಿ ನಡೆಸಿದಾಗ ಆರ್ ಎಸ್ ಸೆಕ್ಟರ್ ನ ಇಬ್ಬರು ನಾಗರಿಕರು ಮೃತಪಟ್ಟರು. ಮೂವರು ಗಾಯಗೊಂಡರೆಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ಸೇನೆಯಿಂದ ಗುಂಡಿನ ಚಕಮಕಿ ಮುಂದುವರಿದಿದೆ.
Next Story