Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಪರಿವರ್ತನಾ ಯಾತ್ರೆಗೆ...

ಬಿಜೆಪಿ ಪರಿವರ್ತನಾ ಯಾತ್ರೆಗೆ ಎಸ್.ಎಂ.ಕೃಷ್ಣ ಸಾಥ್ :ನರೇಂದ್ರ ಮೋದಿಯ ಗುಣಗಾನ

ವಾರ್ತಾಭಾರತಿವಾರ್ತಾಭಾರತಿ19 Jan 2018 10:29 PM IST
share
ಬಿಜೆಪಿ ಪರಿವರ್ತನಾ ಯಾತ್ರೆಗೆ ಎಸ್.ಎಂ.ಕೃಷ್ಣ ಸಾಥ್ :ನರೇಂದ್ರ ಮೋದಿಯ ಗುಣಗಾನ

ಮಂಡ್ಯ/ಮದ್ದೂರು, ಜ.19: ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರ್ಪಡೆಗೊಂಡ ನಂತರ ಗೌಣವಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಮೊದಲ ಬಾರಿಗೆ ತನ್ನ ತವರು ಮದ್ದೂರಿನಲ್ಲಿ ಗುರುವಾರ ಬಿಜೆಪಿಯ ವೇದಿಕೆ ಹಂಚಿಕೊಂಡರು.

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಅಧಿಕೃತವಾಗಿ ತಮ್ಮ ಪ್ರಥಮ ಭಾಷಣ ಮಾಡಿದ ಕೃಷ್ಣ, ನರೇಂದ್ರಮೋದಿ, ಅಮಿತ್ ಶಾ ಸೇರಿದಂತೆ ಬಿಜೆಪಿ ಸರಕಾರವನ್ನು ಭರಪೂರ ಶ್ಲಾಘಿಸಿ ಬಿಜೆಪಿ ಅಧಿಕಾರಕ್ಕೆ ತರಲು ಜತೆ ಜತೆಯಲ್ಲಿ ಹೆಜ್ಜೆ ಹಾಕುವುದಾಗಿ ತಿಳಿಸಿದರು.

ರಾಜ್ಯದಲ್ಲಿರುವ ತನ್ನ ಅನುಯಾಯಿಗಳು ಬಿಜೆಪಿ ಬಲಪಡಿಸಲು ಕಟಿ ಬದ್ದರಾಗಬೇಕು. ಈ ಮೂಲಕ ಮುಂದಿನ ಮುಖ್ಯಮಂತ್ರಿಯಾಗಲಿರುವ ಯಡಿಯೂರಪ್ಪ ಅವರ ಕೈಬಲಪಡಿಸಬೇಕು. ರಾಜ್ಯದಲ್ಲೂ ಕೇಂದ್ರದ ನರೇಂದ್ರಮೋದಿಯವರ ಸರಕಾರದ ಪ್ರತಿಬಿಂಬ ಕಾಣಬೇಕು ಎಂದು ಹೇಳಿದರು.

ದೇಶದಲ್ಲಿ ದೊಡ್ಡ ಪರಿವರ್ತನೆಯಾಗಿದೆ:
2014 ಇಸವಿಯಲ್ಲಿ ಭಾರತ ದೇಶ ದೊಡ್ಡ ಪರಿವರ್ತನೆಯನ್ನು ಕಂಡಿತು. ಈ ಬದಲಾವಣೆಯ ಹರಿಕಾರರಾಗಿ, ಕಾರಣೀಭೂತರಾಗಿ, ಶ್ರೀಸಾಮಾನ್ಯನ ಆಶೀರ್ವಾದದಿಂದ ನರೇಂದ್ರಮೋದಿ ದೇಶದ ಪ್ರಧಾನಿಯಾಗಿ ನಮಗೆ ಒದಗಿ ಬಂದರು ಎಂದು ಕೃಷ್ಣ ಹೇಳಿದರು.

ಮೋದಿ ಅವರು ಪ್ರಧಾನಿಯಾದ ಮೇಲೆ ನಿಷ್ಕಳಂಕವಾದಂತಹ, ಪಾರದರ್ಶಕತೆಯಿಂದ ಕೂಡಿರುವ, ದೇಶದ ಬೆಳವಣಿಗೆಗೆ ಪೂರಕವಾದ ಒಂದು ಆಡಳಿತ ಕೊಡುತ್ತಾ ಬಂದಿದ್ದಾರೆ. ಇತಿಹಾಸವನ್ನು ಮುಂದೆ ಬರೆಯುವವರು ಮೋದಿಯವರಿಂದ ಎಂತಹ ಪರಿವರ್ತನೆ ದೇಶದಲ್ಲಿ ಆಗಿದೆ, ಆಗುತ್ತಾ ಇದೆ, ಆಗುವುದು ಬಹಳಷ್ಟಿದೆ ಎಂಬುದನ್ನು ದಾಖಲಿಸಲಿದ್ದಾರೆ ಎಂದು ಅಭಿಪ್ರಾಯಪಟ್ಟರು.

ದೇಶದ ಜನ ಭ್ರಷ್ಟತೆಯಿಂದ, ಭ್ರಷ್ಟಾಚಾರದಿಂದ ಬೇಸತ್ತು ಹೋಗಿದ್ದರು. ಹಿಂದೆ ಕಾಂಗ್ರೆಸ್‍ನ ಆಡಳಿತದಲ್ಲಿ ಕಂಡಂತಹ ಆರ್ಥಿಕ ವ್ಯವಸ್ಥೆಗೆ ಸಂಬಂಧಪಟ್ಟಂತಹ ಹಲವಾರು ಕೆಟ್ಟ ಪರಿಸ್ಥಿತಿಯನ್ನು ನಾವು ನೋಡಿದೆವು. ಜನರಿಗೆ ಅದರಿಂದ ಮುಕ್ತಿ ಬೇಕಾಗಿತ್ತು. ಆ ಮುಕ್ತಿಯನ್ನು ಕಾಣಲು ಮಾನ್ಯ ನರೇಂದ್ರಮೋದಿಯವರನ್ನು ಈ ದೇಶದ ಜನರೇ ಸೃಷ್ಟಿ ಮಾಡಿದರು ಎಂಬುದು ಅತಿಶಯವಲ್ಲ ಎಂದು ಅವರು ನುಡಿದರು.

ಇಂದು ದೇಶ ವಿಶ್ವದ ಸಮುದಾಯದಲ್ಲಿ ದೊಡ್ಡ ಹೆಸರನ್ನು ಮಾಡಿದೆ. ನಾನೂ ವಿದೇಶಾಂಗ ಸಚಿವನಾಗಿ ಹತ್ತಾರು ದೇಶ ಸುತ್ತಿಬಂದಿದ್ದೇನೆ. ಆದರೆ, ಕಳೆದ ಮೂರು ವರ್ಷದಲ್ಲಿ ಭಾರತಕ್ಕೆ ಸಿಕ್ಕಿರುವ ಜನಮನ್ನಣೆ, ಅದರಲ್ಲೂ ಮೋದಿಗೆ ಸಿಕ್ಕಿರುವ ಪ್ರಾಮುಖ್ಯತೆಯನ್ನು ಪ್ರತಿಯೊಬ್ಬ ಭಾರತೀಯನು ಹೆಮ್ಮೆಯಿಂದ ಹೇಳಿಕೊಳ್ಳಬಹುದಾದ ಬೆಳವಣಿಗೆಯಾಗಿದೆ ಎಂದರು.

ನರೇಂದ್ರಮೋದಿಯವರು ಈ ದೇಶಕ್ಕೆ ಕೊಟ್ಟಿರುವ ಆಡಳಿತದ ಪ್ರತಿಬಿಂಬವನ್ನು ಮುಂದೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿರುವ ಬಿಜೆಪಿ ಸರಕಾರವೂ ಕೊಡಬೇಕು. ಅದು ಅನಿವಾರ್ಯ ಕೂಡ. ಮುಂದೆ ರಾಜ್ಯದ ಮುಖ್ಯಮಂತ್ರಿ ಆಗುವ ಯಡಿಯೂರಪ್ಪ ಅವರು ನರೇಂದ್ರಮೋದಿ ಆಡಳಿತದ ಪ್ರತಿಬಿಂಬದ ಆಡಳತದ ಸಿದ್ದಾಂತಕ್ಕೆ ಕಟ್ಟುಬೀಳಬೇಕಾಗುತ್ತದೆ ಎಂದು ಅವರು ಸಲಹೆ ನೀಡಿದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ:
ನಂತರ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ನಿತ್ಯ ಕೊಲೆ, ಸುಲಿಗೆ ನಡೆಯುತ್ತಿವೆ. ಎರಡು ದಿನಕ್ಕೊಮ್ಮೆ ದಲಿತ ಮಹಿಳೆ, ಮೂರು ದಿನಕ್ಕೊಮ್ಮೆ ಅಮಾಯಕರ ಕೊಲೆ ನಡೆಯುತ್ತಿದೆ ಎಂಬುದಾಗಿ ವರದಿಯೇ ಹೇಳುತ್ತದೆ ಎಂದು ಆರೋಪಿಸಿದರು.

ತಾನು ಮುಖ್ಯಮಂತ್ರಿಯಾದ ಮೇಲೆ ನೀರಾವರಿಗೆ 1 ಲಕ್ಷ ಕೋಟಿ ರೂ. ಮೀಸಲಿಡುತ್ತೇನೆ. ಅದರಲ್ಲಿ ಸಿ.ಪಿ.ಯೋಗೇಶ್ವರ್ ಕೋರಿಕೆಯಂತೆ ಮಂಡ್ಯ ಜಿಲ್ಲೆಯ ನೀರಾವರಿ ಅಭಿವೃದ್ಧಿಗೆ 1,500 ಕೋಟಿ ರೂ. ಕೊಡುತ್ತೇನೆ ಎಂದು ಅವರು ಭರವಸೆ ನೀಡಿದರು.

ಬಿಜೆಪಿ ಪರಿವರ್ತನಾ ಯಾತ್ರೆಗೆ ರಾಜ್ಯಾದ್ಯಂತೆ ವ್ಯಾಪಕ ಜನಬೆಂಬಲ ವ್ಯಕ್ತವಾಗಿದ್ದು, ಜನರ ನಂಬಿಕೆ ಉಳಿಸಿಕೊಳ್ಳುತ್ತೇನೆ. ಎಸ್.ಎಂ.ಕೃಷ್ಣ ಅವರ ಸೇರ್ಪಡೆಯಿಂದ ಬಿಜೆಪಿಗೆ ದೊಡ್ಡ ಬಲ ಬಂದಂತಾಗಿದೆ. ಕೃಷ್ಣ ಅವರ ಅನುಯಾಯಿಗಳು ಬಿಜೆಪಿಗೆ ಬರಬೇಕು ಎಂದು ಅವರು ಮನವಿ ಮಾಡಿದರು.

ಶಾಸಕರಾದ ಸಿ.ಪಿ.ಯೋಗೇಶ್ವರ್, ಸಿ.ಟಿ.ರವಿ, ಮಾಜಿ ಸಂಸದೆ ತೇಜಸ್ವಿನಿ ರಮೇಶ್, ಮಾಜಿ ಶಾಸಕ ಡಿ.ಎಸ್.ವೀರಯ್ಯ, ಮೈಸೂರಿನ ಮಾದೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ನಾಗಣ್ಣಗೌಡ, ಮದ್ದೂರು ತಾಲೂಕು ಅಧ್ಯಕ್ಷ ಲಕ್ಷ್ಮಣ್‍ಕುಮಾರ, ಮಂಡ್ಯ್ ನಗರಾಧ್ಯಕ್ಷ ಎಚ್.ಆರ್.ಅರವಿಂದ್, ಮಲ್ಲಿಕಾರ್ಜುನ್, ವನಜಾಕ್ಷಿ ರಾಮರಾಜು, ಎಂ.ಸಿ.ಸಿದ್ದು, ಚಾಮನಹಳ್ಳಿ ಮಹೇಂದ್ರ, ಟೈರ್ ಗಿರೀಶ್, ರಘು, ವೀರಭದ್ರ, ಗುರುಮಲ್ಲೇಶ್, ಸೇರಿದಂತೆ ಹಲವರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X