ಅಸ್ಸಾಂ, ಜ.20: ರಾಜ್ಯದ ಕೋಕ್ರಝಾರ್ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಹಲವೆಡೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ ಭೂಕಂಪನದ ಪ್ರಮಾಣ 5.2 ಎಂದು ದಾಖಲಾಗಿದೆ.
ಭೂಮಿಯ 52 ಕಿ.ಮೀ. ಆಳದಲ್ಲಿ ಕಂಪನ ಸಂಭವಿಸಿದೆ. ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಯಾವುದೇ ಸಾವು-ನೋವುಗಳ ಬಗ್ಗೆ ವರದಿಯಾಗಿಲ್ಲ.