ಪಾಕ್ ನಿಂದ ಮತ್ತೆ ಕದನವಿರಾಮ ಉಲ್ಲಂಘನೆ: ಭಾರತೀಯ ಯೋಧ ಹುತಾತ್ಮ

ಶ್ರೀನಗರ, ಜ.20: ಜಮ್ಮು ಮತ್ತು ಕಾಶ್ಮೀರದ ಆರ್.ಎಸ್.ಪುರ ಹಾಗು ಅಖ್ನೂರ್ ಸೆಕ್ಟರ್ ಗಳ ಗಡಿ ನಿಯಂತ್ರಣಾ ರೇಖೆಯಲ್ಲಿ ಪಾಕ್ ಸೇನೆಯು ಮತ್ತೊಮ್ಮೆ ಕದನ ವಿರಾಮವನ್ನು ಉಲ್ಲಂಘಿಸಿ ಗುಂಡಿನ ಮಳೆಗರೆದಿದೆ.
ಕೃಷ್ಣ ಘಾಟಿಯಲ್ಲಿ ಪಾಕಿಸ್ತಾನ ಸೇನೆಯ ಗುಂಡಿಗೆ ಭಾರತೀಯ ಯೋಧ ಮಂದೀಪ್ ಸಿಂಗ್ ಹುತಾತ್ಮರಾಗಿದ್ದಾರೆ. ನಿನ್ನೆ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಯಿಂದ ಜಮ್ಮು ಮತ್ತು ಕಾಶ್ಮೀರದ ವಿವಿಧೆಡೆ 11 ಮಂದಿ ನಾಗರಿಕರು ಗಾಯಗೊಂಡಿದ್ದರು.
Next Story