ಉತ್ತರ ಪ್ರದೇಶ: ಬಹಿರ್ದೆಸೆಗೆ ತೆರಳಿದ್ದ ಗರ್ಭಿಣಿಯ ಸಾಮೂಹಿಕ ಅತ್ಯಾಚಾರ

ಲಕ್ನೋ, ಜ.20: ಬಹಿರ್ದೆಸೆಗೆ ತೆರಳಿದ್ದ ಗರ್ಭಿಣಿ ಮಹಿಳೆಯೊಬ್ಬರನ್ನು ದುಷ್ಕರ್ಮಿಗಳ ತಂಡವೊಂದು ಅತ್ಯಾಚಾರಗೈದ ಘಟನೆ ಉತ್ತರ ಪ್ರದೇಶದ ಕಚುಲಾ ಗ್ರಾಮದಲ್ಲಿ ನಡೆದಿದೆ.
ಮುಂಜಾನೆ 5 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮಹಿಳೆಯ ಕೈಕಾಲುಗಳನ್ನು ಕಟ್ಟಿದ ದುಷ್ಕರ್ಮಿಗಳು ಆಕೆಯ ಬಾಯಿಗೆ ಬಟ್ಟೆಯನ್ನು ತುರುಕಿ ಅತ್ಯಾಚಾರಗೈಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಚಂದ್ರಪ್ರಕಾಶ್ ಹೇಳಿದ್ದಾರೆ.
ಮನೆಯಿಂದ ಹೋಗಿ ಗಂಟೆಗಳು ಕಳೆದರೂ ಹಿಂದಿರುಗದಿದ್ದಾಗ ಮನೆಮಂದಿ ಹುಡುಕಾಟ ನಡೆಸಿದ್ದರು. ಸ್ಥಳೀಯ ಕಾಡೊಂದರಲ್ಲಿ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಪೊಲೀಸರಿಗೆ ದೂರು ನೀಡಿದ ಕುಟುಂಬಸ್ಥರು ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿದರು.
ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
Next Story