Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತ ಯುವಕರ ಮರ್ಯಾದಾ ಹತ್ಯೆ ಪ್ರಕರಣ:...

ದಲಿತ ಯುವಕರ ಮರ್ಯಾದಾ ಹತ್ಯೆ ಪ್ರಕರಣ: ಆರು ಮಂದಿಗೆ ಗಲ್ಲು ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ20 Jan 2018 6:37 PM IST
share
ದಲಿತ ಯುವಕರ ಮರ್ಯಾದಾ ಹತ್ಯೆ ಪ್ರಕರಣ: ಆರು ಮಂದಿಗೆ ಗಲ್ಲು ಶಿಕ್ಷೆ

ನಾಸಿಕ್, ಜ.20: 2013ರಲ್ಲಿ ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಅಹ್ಮದ್‌ನಗರ್ ಜಿಲ್ಲೆಯಲ್ಲಿ ಮೂವರು ದಲಿತ ಯುವಕರನ್ನು ಕೊಲೆ ಮಾಡಲಾದ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಗೆ ಇಲ್ಲಿನ ಸ್ಥಳೀಯ ನ್ಯಾಯಾಲಯವು ಮರಣ ದಂಡನೆ ವಿಧಿಸಿದೆ.

2013ರ ಜನವರಿ ಒಂದರಂದು ಸಚಿನ್ ಎಸ್. ಗರು ಹಾಗೂ ಇತರ ಇಬ್ಬರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಏಳು ಮಂದಿಯ ಪೈಕಿ ಆರು ಮಂದಿಯನ್ನು ದೋಷಿಗಳೆಂದು ನಾಸಿಕ್ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಆರ್. ವೈಷ್ಣವ್ ಜನವರಿ 15ರಂದು ತೀರ್ಪು ನೀಡಿದ್ದರು. ಜೊತೆಗೆ ದೋಷಿಗಳು ತಲಾ 20,000 ರೂ. ದಂಡ ಪಾವತಿಸುವಂತೆ ಮತ್ತು ಸರಕಾರವು ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡುವಂತೆಯೂ ನ್ಯಾಯಾಧೀಶರು ಆದೇಶ ನೀಡಿದ್ದರು.

ನ್ಯಾಯಾಲಯವು ಪೋಪಟ್ ವಿ. ದರಂಡಲೆ, ಗಣೇಶ್ ಪಿ. ದರಂಡಲೆ, ಪ್ರಕಾಶ್ ವಿ. ದರಂಡಲೆ, ರಮೇಶ್ ವಿ. ದರಂಡಲೆ, ಅಶೋಕ್ ಎಸ್. ನವ್ಗಿರೆ ಮತ್ತು ಸಂದೀಪ್ ಎಂ. ಕುರೆ ಎಂಬವರಿಗೆ ಮರಣ ದಂಡನೆ ವಿಧಿಸಿ ತೀರ್ಪು ನೀಡಿದೆ.

ಸಚಿನ್ ಗರು (24) ಸೋನೈ ಗ್ರಾಮದ ದರಂಡಲೆ ಕುಟುಂಬಕ್ಕೆ ಸೇರಿದ ಮರಾಠ ಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದ. ಆಕೆಯ ಕುಟುಂಬದ ವಿರೋಧದ ನಡುವೆಯೂ ಪ್ರೇಮಿಗಳು ವಿವಾಹವಾಗಲು ಯೋಜನೆ ರೂಪಿಸಿದ್ದರು. ಇವರ ಪ್ರೀತಿಯ ಬಗ್ಗೆ ಅರಿತ ಯುವತಿಯ ಮನೆಯವರು ಸಚಿನ್ ಹಾಗೂ ಆತನ ಇಬ್ಬರು ಸ್ನೇಹಿತರನ್ನು ಹೊಸ ವರ್ಷದಂದು ತಮ್ಮ ಮನೆಯ ಒಳಚರಂಡಿ ಸ್ವಚ್ಛಗೊಳಿಸಲು ಕರೆದಿದ್ದರು.

 ಯುವತಿಗೆ ಮನೆಗೆ ಆಗಮಿಸಿದ ಮೂವರು ಯುವಕರ ಪೈಕಿ ಮೊದಲಿಗೆ ಸಚಿನ್ ಮೇಲೆ ದಾಳಿ ನಡೆಸಿದ ಆಕೆಯ ಮನೆಯವರು ಆತನ ತಲೆ ಮತ್ತು ಕೈಕಾಲುಗಳನ್ನು ಕತ್ತರಿಸಿ ಚರಂಡಿಗೆ ಎಸೆದರು. ನಂತರ ಆತನ ಜೊತೆಗೆ ಆಗಮಿಸಿದ್ದ ಸಂದೀಪ್ ತನ್ವರ್ (20) ಮತ್ತು ರಾಹುಲ್ ಕಂದರೆ (20) ಯನ್ನು ಹತ್ಯೆ ಮಾಡಿ ಅವರ ದೇಹಗಳನ್ನು ಗ್ರಾಮದ ಹೊರಗಿರುವ ನೀರಿಲ್ಲ ಬಾವಿಯಲ್ಲಿ ಹೂತು ಹಾಕಿದ್ದರು.

ಮೂವರು ಯುವಕರು ಏಕಾಏಕಿ ನಾಪತ್ತೆಯಾದ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ನಡೆಸಿದಾಗ ಸಚಿನ್‌ನ ಛಿದ್ರಗೊಂಡ, ಕೊಳೆತ ದೇಹವು ಚರಂಡಿಯಲ್ಲಿ ಪತ್ತೆಯಾಗಿತ್ತು ಮತ್ತು ಆತನ ಇಬ್ಬರು ಸ್ನೇಹಿತರ ದೇಹಗಳು ಬಾವಿಯೊಳಗಿಂದ ತೆಗೆಯಲಾಯಿತು.

ಮಹಾರಾಷ್ಟ್ರದಲ್ಲಿ ನಡೆದ ಮರ್ಯಾದಾ ಹತ್ಯೆಗಳಲ್ಲಿ ಒಂದಾಗಿದ್ದ ಈ ಪ್ರಕರಣದ ವಿಚಾರಣೆಯು ಐದು ವರ್ಷಗಳ ಕಾಲ ನಡೆದು ಒಟ್ಟಾರೆ 54 ಸಾಕ್ಷಿಗಳಿಂದ ಹೇಳಿಕೆಗಳನ್ನು ದಾಖಲಿಸಲಾಗಿತ್ತು.

ಪ್ರಕರಣವನ್ನು ಆಲಿಸಿದ ನ್ಯಾಯಾಧೀಶರು, ಇದೊಂದು ಅತ್ಯಂತ ಹೀನಾಯ ಮತ್ತು ಭೀಕರ ಪ್ರಕರಣವಾಗಿದೆ. ದೋಷಿಗಳು ಇತರರ ಭಾವನೆಯನ್ನು ಅರ್ಥ ಮಾಡಿಕೊಳ್ಳಲು ಮರೆತಿದ್ದಾರೆ. ಅಂಥ ಜನರಿಗೆ ಈ ಸಮಾಜದಲ್ಲಿ ಬದುಕುವ ಯಾವುದೇ ಹಕ್ಕಿಲ್ಲ. ಹಾಗಾಗಿ ಈ ಸಮಾಜವನ್ನು ಉಳಿಸಲು ಅಂಥವರನ್ನು ಗಲ್ಲಿಗೇರಿಸುವುದೇ ಸರಿಯಾದ ದಾರಿ ಎಂದು ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X