Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಟ್ಟೇವೀರ ಸ್ಪೋಟ್ಸ್ ಕ್ಲಬ್‌ನ...

ಕಟ್ಟೇವೀರ ಸ್ಪೋಟ್ಸ್ ಕ್ಲಬ್‌ನ ರಾಜ್ಯಮಟ್ಟದ ಕಬಡ್ಡಿ ಪಂದ್ಯಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ20 Jan 2018 8:22 PM IST
share
ಕಟ್ಟೇವೀರ ಸ್ಪೋಟ್ಸ್  ಕ್ಲಬ್‌ನ ರಾಜ್ಯಮಟ್ಟದ ಕಬಡ್ಡಿ ಪಂದ್ಯಕ್ಕೆ ಚಾಲನೆ

ಭಟ್ಕಳ, ಜ. 20: ಕ್ರೀಡಾಪಟುಗಳ ಸಾಧನೆಯ ಹಾದಿಯಲ್ಲಿ ಸಾಕಷ್ಟು ಅಡೆತಡೆಗಳು ಬರಲಿದ್ದು, ಅವೆಲ್ಲವನ್ನು ಮೆಟ್ಟಿ ನಿಂತು ಸಾಧನೆಗೈವುದು ಅತೀ ಮುಖ್ಯ ಎಂದು ಶಾಸಕ ಮಂಕಾಳ ವೈದ್ಯ ಹೇಳಿದರು.

ಅವರು ಇಲ್ಲಿನ ಕಟ್ಟೆವೀರ ಸ್ಪೋಟ್ಸ ಕ್ಲಬ್ ಮುಠ್ಠಳ್ಳಿ, ರಂಜನ್ ಇಂಡೆನ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದೊಂದಿಗೆ ಶ್ರೀ ಗುರು ಸುಧೀಂದ್ರ ಕಾಲೇಜು ಮೈದಾನದಲ್ಲಿ ಪುರುಷರಿಗಾಗಿ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನುಉದ್ಘಾಟಿಸಿ ಮಾತನಾಡುತ್ತಿದ್ದರು.

ಸತತ 10 ವರ್ಷಗಳಿಂದ ಕ್ರೀಡೆಗೆ ಉತ್ತೇಜನ ನೀಡುತ್ತಾ ಯುವಕರಿಗೆ ಸ್ಪೂರ್ತಿದಾಯಕ ಕಾರ್ಯ ಮಾಡುತ್ತಿರುವುದು ಪ್ರಶಂಸನೀಯವಾದದ್ದು. ರಾಷ್ಟ್ರ ಮಟ್ಟದಲ್ಲಿ 6 ಕ್ರೀಡಾಪಟುಗಳನ್ನು ಆಯ್ಕೆಯಾಗುವಂತೆ ಮಾಡಿ ಅಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡುವಂತೆ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿದ್ದಾರೆ. ಮುಂದಿನ ದಿನದಲ್ಲಿ ಕ್ರೀಡಾಪಟುಗಳಿಗೆ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ನನ್ನ ಕಡೆಯಿಂದ ಎಲ್ಲಾ ಬೆಂಬಲ ಸಹಕಾರಿ ಸಿಗಲಿದೆ ಎಂದು ಹೇಳಿದರು.

ಮುಖ್ಯ ಅತಿಥಿ ಹಾಗೂ ಕಬಡ್ಡಿ ಕ್ರೀಡಾಂಗಣದ ಉದ್ಘಾಟನೆ ಮಾಡಿದ ಬಿಗ್‌ಬಾಸ್ ಖ್ಯಾತಿಯ ಪ್ರಥಮ್ ಮಾತನಾಡಿ, ಕ್ರಿಕೆಟ್‌ಗೆ ಸಿಗುವಷ್ಟು ಮಹತ್ವ ದೇಶೀಯ ಕ್ರೀಡೆ ಕಬಡ್ಡಿಗೆ ಸಿಗಬೇಕು ಮತ್ತು ಈ ಕುರಿತು ರಾಜ್ಯ ಸರಕಾರಕ್ಕೆ ಮನವಿಯನ್ನು ಮಾಡಲಿದ್ದೇನೆ. ನಾನು ಸಹ ಓರ್ವ ಕಬಡ್ಡಿ ಕ್ರೀಡಾಭಿಮಾನಿಯಾಗಿ ಬಂದಿದ್ದು, ಕಾರ್ಯಕ್ರಮ ಉತ್ತಮ ರೀತಿಯಲ್ಲಿ ಆಯೋಜನೆ ಮಾಡಿದ್ದು ಸಂತಸವಾಗಿದೆ ಎಂದು ಹೇಳಿದರು.

ಇನ್ನೋರ್ವ ಮುಖ್ಯ ಅತಿಥಿಯಾಗಿ ಜಿಲ್ಲಾ ಅಮ್ಯೇಚೂರ್ ಕಬಡ್ಡಿ ಅಸೋಸಿಯೇಶನ ಅಧ್ಯಕ್ಷ ಹಾಗೂ ರಾಜ್ಯ ಉಪಾಧ್ಯಕ್ಷ ಸೂರಜ್ ನಾಯ್ಕ ಸೋನಿ ಮಾತನಾಡಿದ ಅವರು ಕಬಡ್ಡಿಗೆ ಭಟ್ಕಳದಲ್ಲಿ ಸಾಕಷ್ಟು ಪ್ರೋತ್ಸಾಹ ಸಿಗುತ್ತಲಿದ್ದು, ಯುವಕರಿಗೆ ಆಕರ್ಷಣಾ ಕ್ರೀಡೆಯಾಗಿ ಬೆಳೆಯುತ್ತಿದೆ. ಕಬಡ್ಡಿಗೆ ಇನ್ನಷ್ಟು ಉತ್ತೇಜನದ ಅವಶ್ಯಕತೆ ಇದ್ದು ಮುಂದಿನ ದಿನದಲ್ಲಿ ಕಟ್ಟೇವೀರ ಸ್ಪೋಟ್ಸ ಕ್ಲಬ್‌ನಿಂದ ಓರ್ವ ಆಟಗಾರ ಪ್ರೋ ಕಬಡ್ಡಿ ಆಟಗಾರ ಆಯ್ಕೆಯಾಗಿ ಜಿಲ್ಲೆಗೆ ತಾಲೂಕಿಗೆ ಒಳ್ಳೆಯ ಹೆಸರು ಸಿಗುವಂತೆ ಮಾಡಲಿ ಎಂದು ಹಾರೈಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿಕೊಂಡ ಶಿವಾನಿ ಶಾಂತಾರಾಮ ತಾಲುಕಿನಲ್ಲಿ ಸಾಕಷ್ಟು ಪ್ರತಿಭಾನ್ವಿತ ಕ್ರೀಡಾಪಟುಗಳಿದ್ದು, ಅವರು ತೆರೆಮರೆಯಲ್ಲಿದ್ದಾರೆ. ಭಟ್ಕಳದ ಮಲ್ಲಿಗೆಯ ಕಂಪಿನಷ್ಟೇ ಕ್ರೀಡಾಭಿಮಾನಿಗಳು ಇದ್ದು, ಅವರ ಉತ್ಸಾಹ ಪ್ರೋತ್ಸಾಹದಿಂದ ನಮ್ಮಲ್ಲಿನ ಕ್ರೀಡಾಪಟುಗಳ ಬೆಳವಣಿಗೆ ಸಾಧ್ಯವಾಗುತ್ತಿದೆ. ಮುಂದಿನ ದಿನದಲ್ಲಿ ತಾಲೂಕಿನಲ್ಲಿ ರಾಷ್ಟ್ರೀಯ ಮಟ್ಟದ ಕಬಡ್ಡಿ ಆಯೋಜನೆ ಮಾಡಬೇಕೆಂಬ ಆಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಮಂಕಾಳ ವೈದ್ಯ, ಬಿಗ್ ಬಾಸ್ ಖ್ಯಾತಿಯ ಪ್ರಥಮ್, ಸೂರಜ್ ನಾಯ್ಕ ಸೋನಿ, ಜಿ.ಪಂ. ಅಧ್ಯಕ್ಷೆ ಜಯಶ್ರೀ ಮೋಗೇರ, ರಾಜ್ಯ ಅಮೇಚ್ಯುರ ಕಬಡ್ಡಿ ಅಸೋಶಿಯೇಶನ್ ನಿರ್ಣಾಯಕ ಮಂಡಳಿ ಅಧ್ಯಕ್ಷ ಎಂ.ಷಣ್ಮುಗಮ್ ಅವರಿಗೆ ಕಟ್ಟೆವೀರ ಸ್ಪೋಟ್ಸ್  ಕ್ಲಬ್ ಮುಠ್ಠಳ್ಳಿ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಕಟ್ಟೆವೀರ ಸ್ಪೋಟ್ಸ ಕ್ಲಬ್ ಮುಠ್ಠಳ್ಳಿ ಸದಸ್ಯರು, ಪಂದ್ಯದ ಆಟಗಾರರು ಇಲ್ಲಿನ ಪ್ರವಾಸಿ ಮಂದಿರದಿಂದ ಸಂಶುದ್ದೀನ್ ಸರ್ಕಲ ಮಾರ್ಗವಾಗಿ ಶ್ರೀ ಗುರು ಸುಧೀಂದ್ರ ಕಾಲೇಜು ಮೈದಾನದವರೆಗೆ ಮೆರವಣಿಗೆಯಲ್ಲಿ ಸಾಗಿ ವೇದಿಕೆಗೆ ಬಂದರು. ಮೆರವಣಿಗೆಯೂದಕ್ಕೂ ಯಲ್ಲಾಪುರದ ಸಿದ್ದಿ ಜನಾಂಗದವರಿಂದ ಜನಪದ ನೃತೃ ಹಾಗು ಸಿಡಿ ಮದ್ದು ಪ್ರದರ್ಶ ಪ್ರಮುಖ ಆಕರ್ಷಣಿಯವಾಗಿತ್ತು.

ಈ ಸಂದರ್ಭದಲ್ಲಿ ಜಿ.ಪಂ.ಅಧ್ಯಕ್ಷೆ ಜಯಶ್ರೀ ಮೋಗೇರ, ತಾ.ಪಂ. ಅಧ್ಯಕ್ಷ ಈಶ್ವರ ನಾಯ್ಕ, ಜಾಲಿ ಪ.ಪಂ. ಅಧ್ಯಕ್ಷ ಅಬ್ದುಲ್ ರಹೀಂ, ಜಿ.ಪಂ. ಸದಸ್ಯ ಅಲ್ಬರ್ಟ ಡಿಕೋಸ್ತಾ, ಕಟ್ಟೆವೀರ ಸ್ಪೋಟ್ಸ ಕ್ಲಬ್ ಗೌರವಾಧ್ಯಕ್ಷ ರಾಮಕೃಷ್ಣ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಠ್ಠಲ ನಾಯ್ಕ, ನಾಮಧಾರಿ ಸಮಾಜದ ಅಧ್ಯಕ್ಷ ಎಂ.ಆರ್.ನಾಯ್ಕ, ಗ್ರಾ.ಪಂ. ಮುಠ್ಠಳ್ಳಿ ಉಪಾಧ್ಯಕ್ಷ ಗಣಪತಿ ನಾಯ್ಕ, ಪಂ.ಸದಸ್ಯೆ ಮೀನಾಕ್ಷಿ ಜಟ್ಟಪ್ಪ ನಾಯ್ಕ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಕಟ್ಟೆವೀರ ಸ್ಪೋಟ್ಸ ಕ್ಲಬ್ ಮುಠ್ಠಳ್ಳಿ ಅಧ್ಯಕ್ಷ ಶ್ರೀಧರ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದ್ದರು. ಸ್ಪೋಟ್ಸ ಕ್ಲಬ್‌ನ ಸದಸ್ಯ ಕೃಷ್ಣ ಮೂರ್ತಿ ಶೆಟ್ಟಿ ವರದಿ ವಾಚಿಸಿದರು. ಕಾರ್ಯಕ್ರಮದ ಸ್ವಾಗತ ಗಂಗಾಧರ ನಾಯ್ಕ, ನಿರೂಪಣೆ ಮತ್ತು ವಂದನಾರ್ಪಣೆ ಶ್ರೀಧರ ಶೇಟ್ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X