ಶಿವಮೊಗ್ಗ: ಮತದಾರರ ಜಾಗೃತಿ ಜಾಥಾ ಕಾರ್ಯಕ್ರಮ
ಶಿವಮೊಗ್ಗ, ಜ. 20: ಮತದಾರರ ದಿನಾಚರಣೆ ಅಂಗವಾಗಿ ಶನಿವಾರ ಆಯೋಜಿಸಲಾಗಿದ್ದ ಮತದಾರರ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ಅವರು ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಆರಂಭವಾದ ಜಾಥಾದಲ್ಲಿ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು ಭಾಗವಹಿಸಿದ್ದರು.
ಜಾಥಾ ಗೋಪಿವೃತ್ತ, ಅಮೀರ್ ಅಹ್ಮದ್ ವೃತ್ತ ಮಾರ್ಗವಾಗಿ ಸೈನ್ಸ್ ಕಾಲೇಜು ಮೈದಾನದವರೆಗೆ ಸಾಗಿತು. ಮತದಾನದ ಕುರಿತು ಅರಿವು ಮೂಡಿಸುವ, ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವ ಕುರಿತಾದ ಸಂದೇಶಗಳನ್ನು ಒಳಗೊಂಡ ಭಿತ್ತಿಫಲಕಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಕೇಶ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಚಾಡೋ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Next Story