ಮಧ್ಯ ಪ್ರದೇಶ ಸಿಎಂ ನಿವಾಸದ ಎದುರು ವಿಷ ಕುಡಿದ ಅತ್ಯಾಚಾರ ಸಂತ್ರಸ್ತೆ

ಭೋಪಾಲ್, ಜ.21: ಅತ್ಯಾಚಾರ ಸಂತ್ರಸ್ತೆಯೊಬ್ಬರು ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ನಿವಾಸದ ಎದುರು ವಿಷ ಕುಡಿದ ಘಟನೆ ನಡೆದಿದೆ.
ವಿಷ ಸೇವಿಸಿದ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹಮೀದಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ತನ್ನ ಮೇಲೆ ಅತ್ಯಾಚಾರ ಎಸಗಿದವನ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮಹಿಳೆ ವಿಷ ಸೇವಿಸಿದ್ದಾಳೆ ಎನ್ನಲಾಗಿದೆ.
ಅತ್ಯಾಚಾರ ಪ್ರಕರಣದ ಆರೋಪಿ ಸದ್ಯ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದಾನೆ ಎನ್ನಲಾಗಿದೆ.
Next Story