Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರವಾಸಕ್ಕೆ ಕರೆದೊಯ್ದು ಅತ್ಯಾಚಾರ :...

ಪ್ರವಾಸಕ್ಕೆ ಕರೆದೊಯ್ದು ಅತ್ಯಾಚಾರ : ಪ್ರಿಯಕರನ ವಿರುದ್ಧ ದೂರು

ವಾರ್ತಾಭಾರತಿವಾರ್ತಾಭಾರತಿ21 Jan 2018 8:02 PM IST
share
ಪ್ರವಾಸಕ್ಕೆ ಕರೆದೊಯ್ದು ಅತ್ಯಾಚಾರ : ಪ್ರಿಯಕರನ ವಿರುದ್ಧ ದೂರು

ಬೆಂಗಳೂರು, ಜ.21: ಪ್ರವಾಸಕ್ಕೆ ಕರೆದೊಯ್ದು ಪ್ರಿಯಕರ ಅತ್ಯಾಚಾರ ನಡೆಸಿ ಈಗ ಬೆದರಿಕೆ ಹಾಕುತ್ತಿದ್ದಾನೆ ಎಂದು ಯುವತಿಯೊಬ್ಬಳು ಎಚ್‌ಎಎಲ್ ಠಾಣೆ ಪೊಲೀಸರಿಗೆ ದೂರು ನೀಡಿದ್ದಾಳೆ. ಈಗ ಪೊಲೀಸರು ಆರೋಪಿ ದಿನೇಶ್ ಎಂಬವನ ಪತ್ತೆಗೆ ಹುಡುಕಾಟ ನಡೆಸಿದ್ದು, ಘಟನೆ ನಡೆದಿದ್ದ ಮುರುಡೇಶ್ವರ ಠಾಣೆಗೆ ಪ್ರಕರಣ ವರ್ಗಾಯಿಸಲು ಚಿಂತನೆ ನಡೆದಿದೆ.

ನಗರದ ಎಂಎನ್‌ಸಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮತ್ತು ಸಂಜನ(ಹೆಸರು ಬದಲಿಸಲಾಗಿದೆ) ಸ್ನೇಹಿತರಾಗಿದ್ದು, ಇತ್ತೀಚೆಗೆ ಅವರ ನಡುವೆ ಪ್ರೇಮಾಂಕುರವಾಗಿತ್ತು. ಇತ್ತೀಚೆಗೆ ಇವರು ಪ್ರವಾಸಕ್ಕೂ ಹೋಗಿ ಬಂದಿದ್ದರು. ನಂತರ ಈಗ ಯುವತಿ ಪ್ರಿಯಕರ ನನ್ನನ್ನು ಯಾಮಾರಿಸಿ ಬೇರೊಂದು ಹುಡುಗಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ ಮತ್ತು ಮುರುಡೇಶ್ವರಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ನನ್ನನ್ನು ಪ್ರೀತಿಸಿರುವುದಾಗಿ ಹಾಗೂ ಮದುವೆಯಾಗುವುದಾಗಿ ನಂಬಿಸಿ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಕರೆದೊಯ್ದಿದ್ದ. ಬಸ್ ಮಿಸ್ ಆಯಿತೆಂದು ಅಲ್ಲೇ ಉಳಿದುಕೊಳ್ಳಲು ನಿರ್ಧರಿಸಿದೆವು. ಈ ವೇಳೆ ಎಳನೀರಿನೊಳಗೆ ಏನೋ ಮಿಕ್ಸ್ ಮಾಡಿ ಕುಡಿಸಿ ನಂತರ ಅತ್ಯಾಚಾರ ನಡೆಸಿದ್ದಾನೆ. ಎಚ್ಚರಗೊಂಡಾಗ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಗೊತ್ತಾಗಿ ಅಸಮಾಧಾನಗೊಂಡಿದ್ದೆ. ನಂತರ ಮದುವೆಯಾಗುವುದಾಗಿ ಮನವೊಲಿಸಿದ್ದ. ಇತ್ತೀಚೆಗೆ ನಿನ್ನ ಜೊತೆ ಮಾತನಾಡಬೇಕು ಎಂದು ಹೇಳಿ ಮಡಿಕೇರಿಗೆ ಕರೆದೊಯ್ದು ಅಲ್ಲೂ ಅತ್ಯಾಚಾರ ನಡೆಸಿದ್ದಾನೆ. ಅದನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡು ನಂತರ ನನ್ನ ಜೊತೆ ಅಸಭ್ಯವಾಗಿ ವರ್ತಿಸಲಾರಂಭಿಸಿದ್ದ ಎಂದು ಆರೋಪಿಸಿದ್ದಾಳೆ.

ನೀನು ಏನಾದರೂ ಈ ವಿಷಯ ಬಾಯ್ಬಿಟ್ಟರೆ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿ ನಂತರ ನಿನ್ನ ತಾಯಿ-ತಂದೆಗೂ ಕಳುಹಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ದೂರಿದ್ದಾಳೆ. ಈ ಸಂಬಂಧ ದಿನೇಶ್ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಂತ್ರಸ್ತೆ ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X