ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಓಂ ಪ್ರಕಾಶ್ ರಾವತ್

ಹೊಸದಿಲ್ಲಿ, ಜ.21: ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದಾರೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಈ ಹಿಂದೆ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಎ.ಕೆ.ಜೋಟಿ ಸೋಮವಾರ ಸೇವೆಯಿಂದ ನಿವೃತ್ತರಾಗಲಿದ್ದಾರೆ.
ಸರಕಾರವು ಮಾಜಿ ಹಣಕಾಸು ಕಾರ್ಯದರ್ಶಿ ಅಶೋಕ್ ಲವಾಸರನ್ನು ಚುನಾವಣಾ ಆಯುಕ್ತರಾಗಿ ನೇಮಿಸಿದೆ. ಸುನೀಲ್ ಅರೋರಾ ಮತ್ತೋರ್ವ ಚುನಾವಣಾ ಆಯುಕ್ತರಾಗಿದ್ದಾರೆ.
ರಾವತ್ ಹಾಗು ಲವಾಸ ಇಬ್ಬರೂ ಜ.23ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
Next Story