ಆಕಸ್ಮಿಕವಾಗಿ ತನ್ನ ಮೇಲೆಯೇ ಗುಂಡು ಹಾರಿಸಿದ ಯೋಧ
.jpg)
ಸಾಂದರ್ಭಿಕ ಚಿತ್ರ
ಪಟ್ನಾ, ಜ.21: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಧಿಕೃತ ನಿವಾಸದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸೈನಿಕನೊಬ್ಬ ಆಕಸ್ಮಿಕವಾಗಿ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.
ಪೂಜನ್ ಗುರು ಎಂಬವರು ಮುಖ್ಯಮಂತ್ರಿಯವರ ಅಧಿಕೃತ ನಿವಾಸದಲ್ಲಿ ಕರ್ತವ್ಯಕ್ಕೆಂದು ನಿಯೋಜನೆಗೊಂಡಿದ್ದರು. ಶನಿವಾರದಂದು ರಾತ್ರಿ ಹನ್ನೊಂದರಿಂದ ಹನ್ನೆರಡು ಗಂಟೆಯ ಹೊತ್ತಿಗೆ ಅವರು ತಮ್ಮ ಸರ್ವಿಸ್ ರೈಫಲ್ನಿಂದ ಆಕಸ್ಮಿಕವಾಗಿ ತಮ್ಮ ಮೇಲೆ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಡಿ. ಅಮರ್ಕೇಶ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಅವರ ಎದೆಗೆ ಗುಂಡು ತಗಲಿದ್ದು, ಅವರನ್ನು ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story