Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಹೊಂದಾಣಿಕೆ ಇಲ್ಲದ ಹೆಣ್ಣು...

ಉಡುಪಿ: ಹೊಂದಾಣಿಕೆ ಇಲ್ಲದ ಹೆಣ್ಣು ಮಕ್ಕಳಲ್ಲಿ ಮಾನಸಿಕ ಕಾಯಿಲೆ- ಡಾ.ಪ್ರೀತಿ

ವಾರ್ತಾಭಾರತಿವಾರ್ತಾಭಾರತಿ21 Jan 2018 10:17 PM IST
share
ಉಡುಪಿ: ಹೊಂದಾಣಿಕೆ ಇಲ್ಲದ ಹೆಣ್ಣು ಮಕ್ಕಳಲ್ಲಿ ಮಾನಸಿಕ ಕಾಯಿಲೆ- ಡಾ.ಪ್ರೀತಿ

ಉಡುಪಿ, ಜ.21: ಒಂಟಿ ಸಂಸಾರದ ಇಂದಿನ ಸಂಸ್ಕೃತಿಯಲ್ಲಿ ಹೆಣ್ಣು ಮಕ್ಕಳಿಗೆ ಹೊಂದಾಣಿಕೆ ಬಹಳ ಕಷ್ಟವಾಗುತ್ತಿದೆ. ಬಿಡುವಿಲ್ಲದ ಪರಿಸ್ಥಿತಿಯಲ್ಲಿ ಹೊಂದಾಣಿಕೆಯ ಬಗ್ಗೆ ಹೇಳುವ ಹಾಗೂ ಕೇಳುವ ಸಮಯ ಪೋಷಕರಿಗೂ ಹಾಗೂ ಮಕ್ಕಳಿಗೂ ಇಲ್ಲವಾಗಿದೆ. ಇದರ ಪರಿಣಾಮ ಇಂದು ಹೆಣ್ಣು ಮಕ್ಕಳು ಖಿನ್ನತೆ, ದುಃಖ, ಆತಂಕಗಳಂತಹ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಶಿವಮೊಗ್ಗದ ಮನೋ ತಜ್ಞೆ ಡಾ.ಪ್ರೀತಿ ಶಾನುಭಾಗ್ ಹೇಳಿದ್ದಾರೆ.

ಸಾವಣ್ಣ ಪ್ರಕಾಶನದ ವತಿಯಿಂದ ಉಡುಪಿಯ ಮನೋತಜ್ಞ ಡಾ.ವಿರೂ ಪಾಕ್ಷ ದೇವರಮನೆ ಅವರ ‘ಹೋಗಿ ಬಾ ಮಗಳೇ...’ ಪುಸ್ತಕವನ್ನು ರವಿವಾರ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬಿಡುಗಡೆ ಗೊಳಿಸಿ ಅವರು ಮಾತನಾಡುತಿದ್ದರು.

ಇಂದು ಹೆಣ್ಣುಮಕ್ಕಳಿಗೆ ಸಿಗುವ ಸಂಪನ್ಮೂಲ, ಅವಕಾಶ, ಶಿಕ್ಷಣ, ಆರ್ಥಿಕ ಸ್ವಾತಂತ್ರವು ಹಿಂದಿಗಿಂತ ಹೆಚ್ಚು. ಅದೇ ರೀತಿ ಹಿಂದಿಗಿಂತ ಇಂದು ಒತ್ತಡವನ್ನು ಅನುಭವಿಸುವುದು ಕೂಡ ಅವರೇ ಆಗಿದ್ದಾರೆ ಎಂದ ಅವರು, ಮನಸ್ಸಿನ ಒತ್ತಡ, ವೇದನೆ ನಮ್ಮ ದೇಹದ ಮೇಲು ಪರಿಣಾಮ ಬೀರಿ ದೈಹಿಕ ಕಾಯಿಲೆಗಳಿಗೂ ನಾವು ತುತ್ತಾಗುತ್ತೇವೆ. ಇದು ಹೆಣ್ಣು ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ ಎಂದರು.

ಮದುವೆ ನಮ್ಮ ಜೀವನ ಅತಿ ಮುಖ್ಯ ನಿರ್ಧಾರ. ಆದುದರಿಂದ ಮದುವೆಗೆ ಸಾಕಷ್ಟು ಪೂರ್ವ ತಯಾರಿ ಅಗತ್ಯ. ಇಂದಿನ ಸಾಮಾಜಿಕ ಪರಿಸ್ಥಿತಿಯಲ್ಲಿ ಮದುವೆಯ ಪೂರ್ವ ತಯಾರಿ ಗಂಡಿಗಿಂತ ಹೆಣ್ಣು ಮಕ್ಕಳಿಗೆ ಹೆಚ್ಚು ಇರುತ್ತದೆ. ಇಂದು ಭಾರತದಲ್ಲಿ ವಿಚ್ಛೇಧನೆ ಸಂಖ್ಯೆ ವೇಗವಾಗಿ ಬೆಳೆಯುತ್ತಿದೆ. ನಮ್ಮ ದೇಶ ದಲ್ಲಿ ಇಂದು ಮದುವೆಗಳನ್ನು ಮುರಿಯುದಕ್ಕಿಂತ ಹೆಚ್ಚಾಗಿ ಒಟ್ಟುಗೂಡಿಸುವ ಪ್ರಯತ್ನಗಳು ಹೆಚ್ಚಿನ ಕುಟುಂಬಗಳಲ್ಲಿ ನಡೆಯುತ್ತಿರುತ್ತವೆ ಎಂದರು.

ಹೆಣ್ಣು ಮಕ್ಕಳಿಗೆ ಸ್ವಾತಂತ್ರ ಸಿಕ್ಕಿದೆ ಎಂದು ನಾವು ಅನಿಸಿ ಕೊಂಡರೂ ಸಣ್ಣ ಸಣ್ಣ ವಿಷಯಗಳಲ್ಲಿ ಗಂಡು ಹೆಣ್ಣಿನ ಮಧ್ಯೆ ತಾರತಮ್ಯಗಳು ಇಂದಿಗೂ ಕಂಡು ಬರುತ್ತಿವೆ. ನಮ್ಮ ಯೋಚನೆ ಇಂದಿಗೂ ಒಂದು ಚೌಕಟ್ಟಿ ನಲ್ಲಿದೆ. ಆದುದರಿಂದ ಗಂಡು ಹೆಣ್ಣು ಎಂಬ ಬೇಧ ಭಾವ ಕೂಡ ನಮ್ಮ ಮನಸ್ಸಿನ ಆಳದಲ್ಲಿ ಈಗಲೂ ಇದೆ ಎಂದು ಅವರು ಹೇಳಿದರು.

ಉಡುಪಿ ಡಾ.ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ. ಭಂಡಾರಿ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಗಿರಿಜಾ ರಾವ್, ಮಣಿಪಾಲ ಯುರೋಪಿಯನ್ ಅಧ್ಯಯನ ಕೇಂದ್ರದ ನಿರ್ದೇಶಕಿ ಡಾ.ನೀತಾ ಇನಾಂದಾರ್, ಸಾವಣ್ಣ ಪ್ರಕಾಶನದ ಜಮೀರ್ ಉಪಸ್ಥಿತರಿದ್ದರು. ಡಾ.ವಿರೂಪಾಕ್ಷ ದೇವರಮನೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ವೀಣಾ ವಿರೂಪಾಕ್ಷ ಸ್ವಾಗತಿಸಿದರು. ಪೂರ್ಣಿಮಾ ಸುರೇಶ್ ಕಾರ್ಯಕ್ರಮ ನಿರೂಪಿಸಿದರು.


ಹೊಂದಾಣಿಕೆ ಇಂದಿನ ಅಗತ್ಯ
ಒಂದು ಕಡೆ ಅತಿಯಾದ ಸ್ವಾತಂತ್ರ ಇದ್ದರೂ ಅದನ್ನು ಬಳಕೆ ಮಾಡುವುದು ಮತ್ತು ಅದರ ಜವಾಬ್ದಾರಿಗಳ ಬಗ್ಗೆ ಅರಿವೇ ಇಲ್ಲದ ಹೆಣ್ಣು ಮಕ್ಕಳಿದ್ದರೆ, ಇನ್ನೊಂದು ಕಡೆ ತಮ್ಮ ಹಕ್ಕುಗಳ ಬಗ್ಗೆ ಅರಿವೇ ಇಲ್ಲದ ಹೆಣ್ಣು ಮಕ್ಕಳು ನಮ್ಮ ದೇಶದಲ್ಲಿದ್ದಾರೆ. ಇದನ್ನು ಸರಿತೂಗಿಸಬೇಕು. ಹೊಂದಾಣಿಕೆ ಮಾಡಿ ಜೀವನ ನಡೆಸುವಂತಾಗಬೇಕು. ಕೇವಲ ಮಹಿಳಾ ಹಕ್ಕುಗಳನ್ನು ಮಾತ್ರ ಪ್ರತಿಪಾದಿಸಿ ಕೊಂಡು ಹೋದರೆ ನಮ್ಮ ಸುತ್ತಮುತ್ತಲಿನ ಎಲ್ಲ ಸಂಬಂಧಗಳನ್ನು ನಾವು ಕಳೆದು ಕೊಳ್ಳಬೇಕಾಗುತ್ತದೆ ಎಂದು ಡಾ.ಪ್ರೀತಿ ಶಾನುಭಾಗ್ ಅಭಿಪ್ರಾಯ ಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X