Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಅಗಲಿದ ಕಮ್ಯೂನಿಸ್ಟ್...

ಮಂಗಳೂರು: ಅಗಲಿದ ಕಮ್ಯೂನಿಸ್ಟ್ ಚೇತನಗಳಿಗೆ ಸಾರ್ವಜನಿಕ ನುಡಿ-ನಮನ

ವಾರ್ತಾಭಾರತಿವಾರ್ತಾಭಾರತಿ21 Jan 2018 10:30 PM IST
share
ಮಂಗಳೂರು: ಅಗಲಿದ ಕಮ್ಯೂನಿಸ್ಟ್ ಚೇತನಗಳಿಗೆ ಸಾರ್ವಜನಿಕ ನುಡಿ-ನಮನ

ಮಂಗಳೂರು, ಜ.21: ಕಮ್ಯೂನಿಸ್ಟ್ ಪಕ್ಷದ ರಿಯ ಚೇತನಗಳಾದ ಕಾಮ್ರೇಡ್ ಬಿ.ವಿಶ್ವನಾಥ ನಾಯಕ್ ಮತ್ತು ಕಾಮ್ರೇಡ್ ಪಿ.ಸಂಜೀವ ಅವರುಗಳ ಅಕಾಲಿಕ ನಿಧನದ ಬಗ್ಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ)ದ.ಕ. ಮತ್ತು ಉಡುಪಿ ಜಿಲ್ಲಾ ಸಮಿತಿ ಹಾಗೂ ಸಾರ್ವಜನಿಕರ ಪರವಾಗಿ ಶ್ರದ್ಧಾಂಜಲಿ ಸಭೆಯು ರವಿವಾರ ಬೆಳಗ್ಗೆ ಬಿ.ಸಿ.ರೋಡು ಹೊಟೇಲ್‌ವೊಂದರ ಶುಭಾಂಗಣದಲ್ಲಿ ಜರಗಿತು.

ಸಭೆಯಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷದ ರಾಜ್ಯ ಮುಖಂಡರೂ, ಎಐಟಿಯುಸಿ ರಾಜ್ಯಾಾಧ್ಯಕ್ಷರೂ ಆದ ಎಚ್. ಅನಂತ ಸುಬ್ಬರಾವ್ ಮಾತನಾಡಿ, ದ.ಕ. ಜಿಲ್ಲೆಯ ರೈತ ಕಾರ್ಮಿಕ ಚಳುವಳಿಗಳ ರೂವಾರಿಗಳಾದ ಇವರಿಬ್ಬರೂ ತನ್ನ ವೈಯಕ್ತಿಕ ಬದುಕಿಗಿಂತ ಸಾರ್ವಜನಿಕರ ಬದುಕಿಗೆ ಪ್ರಾಮುಖ್ಯತೆ ಕೊಟ್ಟವರು. ಭೂಸುಧಾರಣಾ ಚಳವಳಿಯಲ್ಲಿ ‘ಉಳುವವನೇ ಹೊಲದೊಡೆಯ’ ಕಾನೂನು ಜಾರಿಗಾಗಿ ಹೋರಾಡಿ ಗೇಣಿದಾರರಿಗೆ ಭೂಮಿ ತೆಗೆಸಿಕೊಟ್ಟವರು. ರೈತಾಪಿ ಕೃಷಿಕೂಲಿ ಬೀಡಿ ಕಾರ್ಮಿಕರ ಬದುಕನ್ನು ಹಸನಾಗಿಸಲು ಇವರೀರ್ವರ ಹೋರಾಟ ಅವಿಸ್ಮರಣೀಯ. ಆದರೆ ಇಂದು ಪ್ಯಾಸಿಸ್ಟ್ ಮನೋಭಾವದಿಂದ ಜನಪರ ಹೋರಾಟಗಳು ನಗಣ್ಯವಾಗುತ್ತಿರುವುದು ನೋವು ತರುತ್ತಿದೆ ಎಂದರು.

ಈ ಇಬ್ಬರು ಹೋರಾಟಗಾರರ ಆದರ್ಶಗಳನ್ನು ಪಾಲಿಸುವುದೇ ಇವರಿಗೆ ನೀಡುವ ನಿಜವಾದ ನುಡಿನಮನ ಎಂದವರು ಹೇಳಿದರು.ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ, ದೀನ ದಲಿತರ, ಬಡವರ್ಗಗಳ ಅಭ್ಯುದಯಕ್ಕಾಗಿ ಶೋಷಣೆ ಮುಕ್ತ ಸಮಾಜಕ್ಕಾಗಿ ಈ ಎರಡು ಚೇತನಗಳು ದುಡಿದಿವೆ. ಭೂ ಮಸೂದೆ ಕಾನೂನು ಜಾರಿಯಾದಾಗ ಗೇಣಿದಾರರ ಪರವಾಗಿದ್ದವರು ಈ ಕಮ್ಯೂನಿಸ್ಟ್ ನಾಯಕರು. ನಾನು ಮತ್ತು ಬಿ.ವಿಶ್ವನಾಥ ನಾಯಕ್ ಭೂ ಅಭಿವೃದ್ಧಿ ಬ್ಯಾಂಕಿನ ನಿರ್ದೇಶಕರಾಗಿದ್ದಾಗ ವಿಧಾನ ಸಭಾ ಚುನಾವಣೆಯಲ್ಲಿ ನಾಬ್ಬರು ಸ್ಪರ್ಧಿಸುತ್ತಿದ್ದಾಗ ನಮ್ಮ ಸಂಬಂಧ, ಪ್ರೀತಿ ಗಟ್ಟಿಯಾಯಿತು. ಇವರು ಅಭಿಮಾನ ಮತ್ತು ಪ್ರೀತಿಯ ಸಂಕೇತವಾಗಿದ್ದರು. ಸರಳ, ಸಜ್ಜನಿಕೆಯ ವ್ಯಕ್ತಿಗಳಾಗಿದ್ದರು. ಇವರ ಆದರ್ಶ ಆಲೋಚನೆ ಯೋಜನೆ ಜೀವಂತವಾಗಿರಲಿ ಎಂದು ಅಗಲಿದ ಸಂಗಾತಿಗಳಿಗೆ ನುಡಿನಮನ ಸಲ್ಲಿಸಿದರು.

ಸಭೆಯಲ್ಲಿ ಸಿಪಿಐ(ಎಂ) ಮುಂದಾಳು ಯಾದವ ಶೆಟ್ಟಿ, ವಾಸುಗಟ್ಟಿ, ಸಿಪಿಐ ಕಾಸರಗೋಡು ಜಿಲ್ಲಾ ಸಹಕಾರ್ಯದರ್ಶಿ ಬಿ.ವಿ.ರಾಜನ್, ಬೂಡಾದ ಅಧ್ಯಕ್ಷ ಸದಾಶಿವ ಬಂಗೇರ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ವಕೀಲ ಅಶ್ವನಿ ಕುಮಾರ್ ರೈ, ಬಿ.ವಿ.ನಾಯಕ್‌ರ ಸಂಬಂಧಿ ಜಯಾ ನಾಯಕ್, ಪಿ.ಸಂಜೀವರ ಪುತ್ರ ಯೋಗೀಶ್ ಕುಮಾರ್ ಮುಂತಾದವರು ನುಡಿ-ನಮನ ಸಲ್ಲಿಸಿದರು.

ವೇದಿಕೆಯಲ್ಲಿ ತಾಲೂಕು ಪಂಚಾಯತ್ ಸದಸ್ಯ ಅಬ್ಬಾಸ್ ಅಲಿ ಉಪಸ್ಥಿತರಿದ್ದರು.ಸಿಪಿಐ ಜಿಲ್ಲಾ ಸಹಕಾರ್ಯದರ್ಶಿ ಬಿ.ಶೇಖರ್ ಅಧ್ಯಕ್ಷತೆ ವಸಿದ್ದರು. ಸಿಪಿಐ ಜಿಲ್ಲಾ ಸಹಕಾರ್ಯದರ್ಶಿ ವಿ.ಎಸ್.ಬೇರಿಂಜ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಪಕ್ಷದ ಜಿಲ್ಲಾ ಮುಖಂಡ ಸುರೇಶ್ ಕುಮಾರ್‌ವಂದಿಸಿರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X