'ಪದ್ಯಾವತ್' ಚಿತ್ರ ಬಿಡುಗಡೆ ಆದೇಶದ ಪುನರ್ ಪರಿಶೀಲನೆ: ರಾಜಸ್ಥಾನ,ಮಧ್ಯಪ್ರದೇಶದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ಹೊಸದಿಲ್ಲಿ, ಜ.22: ವಿವಾದಾತ್ಮಕ ‘ಪದ್ಮಾವತ್’ ಚಿತ್ರವನ್ನು ದೇಶದಾದ್ಯಂತ ಬಿಡುಗಡೆಗೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಮರು ಪರಿಶೀಲನೆಗೆ ಸಂಬಂಧ ರಾಜಸ್ಥಾನ ಮತ್ತು ಮಧ್ಯ ಪ್ರದೇಶ ಸರಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜ.23ರಂದು ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿ ನೀಡಿದೆ.
ಜ.25ರಂದು ದೇಶದಾದ್ಯಂತ ಪದ್ಮಾವತ್ ಚಿತ್ರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿತ್ತು. ಈ ಸಂಬಂಧ ರಾಜಸ್ಥಾನ ಮತ್ತು ಮಧ್ಯ ಪ್ರದೇಶ ಸರಕಾರಗಳು ಮಂಗಳವಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಅರ್ಜಿಯ ಪರಿಶೀಲನೆ ನಡೆಸಿದ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಮಂಗಳವಾರ ಅರ್ಜಿ ವಿಚಾರಣೆ ನಡೆಸಲಿದೆ.
Next Story