ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣ: ನಾಳೆ ಬಾಂಬೆ ಹೈಕೋರ್ಟ್‌ನಲ್ಲಿ ಪಿಐಎಲ್ ವಿಚಾರಣೆ

ಮುಂಬೈ, ಜ. 22, ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣದ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು ಬಾಂಬೆ ಉಚ್ಚ ನ್ಯಾಯಾಯಾಲಯ ಮಂಗಳವಾರ ನಡೆಸಲಿದೆ.
ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಲು ನಿರ್ದೇಶನ ನೀಡುವಂತೆ ಕೋರಿ ಬಾಂಬೆ ನ್ಯಾಯವಾದಿಗಳ ಸಂಘಟನೆ ಸಾರ್ವಜನಿಕ ಹಿತಾಸಕ್ತಿ ದಾವೆ ಸಲ್ಲಿಸಿದೆ.
ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ನ್ಯಾಯಮೂರ್ತಿ ಜೆ.ಟಿ. ಉತ್ಪಾಟ್ ಅವರ ವರ್ಗಾವಣೆಯನ್ನು ಕೂಡ ಅರ್ಜಿ ಪ್ರಶ್ನಿಸಿದೆ. ಉತ್ಪಾಟ್ ಬದಲು ಬಿ.ಎಚ್. ಲೋಯಾ ಅವರನ್ನು ನೇಮಿಸಲಾಗಿತ್ತು.
ಲೋಯಾ ಅವರ ಸಾವನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಕೋರಿ ಬಾಂಬೆ ನ್ಯಾಯವಾದಿಗಳ ಸಂಘಟನೆ ಕೂಡ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದೆ.
Next Story